ಮಡಿಕೇರಿ :-ಕೊಡಗು ಜಿಲ್ಲೆಯಲ್ಲಿ ಅಕ್ಷರ ದಾಸೋಹ (ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಉಪಹಾರ) ಯೋಜನೆಯಡಿ ಸರ್ಕಾರಿ/ ಅನುದಾನಿತ ಶಾಲೆಗಳ 1 ರಿಂದ 10 ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಆಹಾರ ಧಾನ್ಯ ಹಂಚಿಕೆ ಮಾಡುವ ಕಾರ್ಯ ಪುನರಾರಂಭಗೊಂಡಿದೆ. ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಇತ್ತೀಚೆಗೆ ನಗರದ ಆಹಾರ ಧಾನ್ಯ ಸಂಗ್ರಹಿಸಲ್ಪಟ್ಟ ಗೋದಾಮಿಗೆ ಭೇಟಿ ನೀಡಿ ಆಹಾರ ಧಾನ್ಯಗಳ ಗುಣಮಟ್ಟ ಪರಿಶೀಲಿಸಿದರು.
ಸರ್ಕಾರದ ಹೊಸ ಆದೇಶದಂತೆ ಆಹಾರ ಧಾನ್ಯವನ್ನು ಜುಲೈ ಮಾಹೆಯವರೆಗೆ ವಿತರಿಸಲಾಗುವುದು. ಜಿಲ್ಲೆಯ ಸಾರ್ವಜನಿಕ ಶಿಕ್ಷಣ ಇಲಾಖೆಗೆ ಹಂಚಿಕೆ ಕಾರ್ಯದ ಮೇಲುಸ್ತುವಾರಿ ವಹಿಸಲಾಗಿದೆ. ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಮಚ್ಚಾಡೋ ಮತ್ತು ಆಹಾರ ಇಲಾಖೆಯ ಉಪ ನಿರ್ದೇಶಕರಾದ ಗೌರವ್ ಕುಮಾರ್ ಶೆಟ್ಟಿ, ಶಿಕ್ಷಣಾಧಿಕಾರಿ ಕೃಷ್ಣಪ್ಪ ಇತರರು ಇದ್ದರು.

No comments
Post a Comment