ಏ 4ರಂದು ಮಾಲ್ದಾರೆಯಲ್ಲಿ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟ .
ಸಿದ್ದಾಪುರ : ಮಾಲ್ದಾರೆ ಜನಪರ ಸಂಘದ ಮೂರನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟ ಶಾಲಾ ಮುಂಭಾಗದ ಮೈದಾನದಲ್ಲಿ ನಾಳೆ ಭಾನುವಾರ ಏ 4ರಂದು ನಡೆಯಲಿದೆ ಎಂದು ಜನಪರ ಸಂಘದ ಅಧ್ಯಕ್ಷ ಆಂಟೋನಿ ಪತ್ರಿಕೆಗೆ ತಿಳಿಸಿದ್ದಾರೆ .ಜಿಲ್ಲಾ ಜನಪರ ಕ್ರೀಡಾ ಮತ್ತು ಕಲಾ ಯುವಜನ ಸಂಘದ ಆಶ್ರಯದಲ್ಲಿ ವಾಲಿಬಾಲ್ ಪಂದ್ಯಾವಳಿ ನಡೆಯಲಿದ್ದು ಈಗಾಗಲೇ ಹದಿನೇಳು ತಂಡಗಳು ಭಾಗವಹಿಸಲಿದೆ .ಪಂದ್ಯಾವಳಿಯಲ್ಲಿ ವಿಜೇತ ತಂಡಗಳಿಗೆ 15555.ದ್ವಿತೀಯ ಬಹುಮಾನ 7777 ನೀಡಲಿದ್ದು ಆಟಗಾರರಿಗೆ ವಿಶೇಷ ಬಹುಮಾನ ನೀಡಲಾಗುವುದು . ಉದ್ಘಾಟನಾ ಕಾರ್ಯಕ್ರಮಕ್ಕೆ ದಾನಿಗಳು, ಸಮಾಜಸೇವಕರು, ಗಣ್ಯರು ಭಾಗವಹಿಸಲಿದ್ದು ವಿವಿಧ ಕ್ಷೇತ್ರದಲ್ಲಿ ಸಾಧನೆಗೈದಿರುವ ಸಮಾಜ ಸೇವಕರಿಗೆ ಸನ್ಮಾನ ಕಾರ್ಯಕ್ರಮವೂ ನಡೆಯಲಿದೆ ಕೊವೀಡ್ ನಿಯಮ ಪಾಲಿಸುವ ಮೂಲಕ ಆಟಗಾರರು ಕಡ್ಡಾಯವಾಗಿ ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕೆಂದು ಆಂಟೋನಿ ಮನವಿ ಮಾಡಿದ್ದಾರೆ
No comments
Post a Comment