ರಾಜ್ಯ ಕಾನೂನು ಘಟಕದ ಉಪಾಧ್ಯಕ್ಷ ವೆಂಕಟೇಶ್ ಅವರಿಂದ ಕೋವಿಡ್ ಸಂತ್ರಸ್ತ ಕುಟುಂಬಗಳಿಗೆ ಕಿಟ್ ವಿತರಣೆ

No comments
ಕಾನೂನು ಘಟಕದ ಉಪಾಧ್ಯಕ್ಷ ಎಂ ಎಸ್ ವೆಂಕಟೇಶ್ ಅವರಿಂದ ಕೋವಿಡ್  ಸಂತ್ರಸ್ತರಿಗೆ ಕಿಟ್ ವಿತರಣೆ

ಸಿದ್ದಾಪುರ  :ನಿರಂತರ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ರಾಜ್ಯ ಕಾನೂನು ಘಟಕದ ಉಪಾಧ್ಯಕ್ಷರಾಗಿರುವ ಸಿದ್ದಾಪುರದ  ಎಂ.ಎಸ್ ವೆಂಕಟೇಶ್  ವೈಯಕ್ತಿಕವಾಗಿ ಇಪ್ಪತ್ತೈದು ಸಾವಿರ ಮೌಲ್ಯದ ಆಹಾರ ಪದಾರ್ಥಗಳ ಕಿಟ್ಟ್ ಗಳನ್ನು ಗುಹ್ಯ ಕಕ್ಕಟ್ಟುಕಾಡು ಕೋವಿಡ್  ಸಂತ್ರಸ್ತರಿಗೆ ವಿತರಿಸಿ ಮಾನವೀಯತೆ ಮೆರೆದಿದ್ದಾರೆ.
ಸಿದ್ದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 
ಕೂಲಿ ಕಾರ್ಮಿಕರೇ ಅಧಿಕವಾಗಿದ್ದು.
ಕೋವಿಡ್  ಸಂದರ್ಭದಲ್ಲಿ  ಸಂತ್ರಸ್ತರು 
ಹಲವು ಸಮಸ್ಯೆಗಳನ್ನು ಎದುರಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ .
ಇಂತಹ ಸಂದರ್ಭದಲ್ಲಿ ಸರ್ಕಾರ ಹಾಗೂ ಜಿಲ್ಲಾಡಳಿತ ಕೋವಿಡ್  ಸಂತ್ರಸ್ಥರಿಗೆ ಬೇಕಾದ ಅಗತ್ಯ ಕಿಟ್ಟ್ ಗಳನ್ನು ನೀಡುವ ವ್ಯವಸ್ಥೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.
 ಸ್ವಂತ ಖರ್ಚಿನಲ್ಲೇ ಗ್ರಾಮದ ಜನರಿಗೆ ಬೇಕಾದ ಆಹಾರ ಪದಾರ್ಥಗಳ ಕಿಟ್  ಗಳನ್ನ ನೀಡಿರುವ ವೆಂಕಟೇಶ್ ಅವರ ಸೇವಾ ಕಾರ್ಯಕ್ಕೆ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ .

No comments

Post a Comment