ಆರೋಗ್ಯ ಕೇಂದ್ರಗಳಿಗೆ ಹಿರಿಯ ಕಾರ್ಮಿಕ ನಿರೀಕ್ಷಕರಭೇಟಿ
ಸಿದ್ದಾಪುರ :ಕೋವಿಡ್ ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರ ಹಲವಾರು ಮುಂಜಾಗ್ರತ ಕ್ರಮ ಕೈಗೊಂಡಿದ್ದು ಎಲ್ಲರೂ ಸಹಕರಿಸುವ ಮೂಲಕ 18ವರ್ಷ ಮೇಲ್ಪಟ್ಟವರು ಕಡ್ಡಾಯವಾಗಿ ವ್ಯಾಕ್ಸಿನ್ ಹಾಕಿಸಿಕೊಂಡು ಕೋರೊನ ಮುಕ್ತ ರಾಜ್ಯವನ್ನಾಗಿಸಲು ಪ್ರತಿಯೊಬ್ಬರು ಸಹಕರಿಸಬೇಕೆಂದು ವಿರಾಜಪೇಟೆ ತಾಲ್ಲೂಕು ಹಿರಿಯ ಕಾರ್ಮಿಕ ನಿರೀಕ್ಷಕರಾದ ಜಯಣ್ಣ ಕಾರ್ಮಿಕರಲ್ಲಿ ಮನವಿ ಮಾಡಿದರು. ವಿರಾಜಪೇಟೆ ತಾಲೂಕಿನ ಪಾಲಿಬೆಟ್ಟ, ಚೆನ್ನಯ್ಯನಕೋಟೆ, ಸಿದ್ದಾಪುರ, ಮಾಲ್ದಾರೆ ಸೇರಿದಂತೆ ಹಲವು ಗ್ರಾಮಗಳಿಗೆ ಭೇಟಿ ನೀಡಿ ಕೋವಿಡ್ ಸಂಬಂಧ ಆಸ್ಪತ್ರೆ ವೈದ್ಯರುಗಳಿಂದ ಮಾಹಿತಿ ಪಡೆದರು.ಈ ಸಂದರ್ಭ ಪತ್ರಿಕೆಯೊಂದಿಗೆ ಮಾತನಾಡಿ ವಿರಾಜಪೇಟೆ ತಾಲ್ಲೂಕಿನಲ್ಲಿ 3ಸಾವಿರಕ್ಕೂ ಹೆಚ್ಚು ಕಾರ್ಮಿಕರು ನೊಂದಾವಣೆ ಮಾಡಿಕೊಂಡಿದ್ದು. ಕೋವಿಡ್-19ನ್ನು ತಡೆಗಟ್ಟಲು 18 ವರ್ಷ ಮೇಲ್ಪಟ್ಟವರು ವ್ಯಾಕ್ಸೀನ್ ತೆಗೆದುಕೊಳ್ಳಲುತಾಲ್ಲೂಕು ಕಾರ್ಮಿಕ ಇಲಾಖೆಯಿಂದ ಅಥವಾ ಕಾರ್ಮಿಕ ಸಂಘಟನೆಗಳಿಂದ ಅರ್ಜಿ ನಮೂನೆಯನ್ನು ಭರ್ತಿಮಾಡಿ, ಕಟ್ಟಡ ಕಾರ್ಮಿಕರ ನೋಂದಣಿ ಕಾರ್ಡ್ ಮತ್ತು ಆಧಾರ್ ಕಾರ್ಡ್ ಲಗತ್ತಿಸಿ ತಾಲ್ಲೂಕು ಹಿರಿಯ ಕಾರ್ಮಿಕ ನಿರೀಕ್ಷಕರ ಸಹಿ ಪಡೆದಕೊಳ್ಳುವಂತೆಮನವಿ ಮಾಡಿದರು. ನೋಂದಾಯಿತ ಕಾರ್ಮಿಕರು ಸರ್ಕಾರದ ಸವಲತ್ತುಗಳನ್ನು ಪಡೆದುಕೊಂಡು ಸಮಾಜದ ಮುಖ್ಯವಾಹಿನಿಗೆ ಬರುವ ಮೂಲಕ ಆರೋಗ್ಯವಂತ ಸಮಾಜ ನಿರ್ಮಾಣ ಮಾಡಲು ಕೈ ಜೋಡಿಸಬೇಕೆಂದರು. ಈ ಸಂದರ್ಭ ಸಿದ್ದಾಪುರ ವೈದ್ಯಾಧಿಕಾರಿ ರಾಘವೇಂದ್ರ ಇದ್ದರು.
No comments
Post a Comment