ಕೊರೋನಾ ನಡುವೆ ಮಕ್ಕಳ ಭವಿಷ್ಯದ ಮೇಲೆ ಶಿಕ್ಷಣ ಇಲಾಖೆ ಚೆಲ್ಲಾಟ ಖಂಡನೆ :ಸರಿತಾ ಪೂಣಚ್ಚ
ಮಡಿಕೇರಿ : ಕಳೆದ 2ವರ್ಷಗಳಿಂದ ಕೋವಿಡ್ ಸಂಕಷ್ಟದ ಪರಿಸ್ಥಿತಿಯಲ್ಲಿ ಮನೆ ಪಾಠದೊಂದಿಗೆ ಕಲಿಕೆಯಲ್ಲಿರುವ ವಿದ್ಯಾರ್ಥಿಗಳಿಗೆ ಧೈರ್ಯ ತುಂಬಬೇಕಾದ ಶಿಕ್ಷಣ ಇಲಾಖೆ ಆನ್ ಲೈನ್ ಪರೀಕ್ಷೆ ನಡೆಸುವ ಮೂಲಕ ಮಕ್ಕಳ ಮೇಲೆ ಕೋವಿಡ್ ಪರಿಣಾಮ ಬೀರುವುದರೊಂದಿಗೆ ಭವಿಷ್ಯವನ್ನು ಹಾಳು ಮಾಡಲು ಮುಂದಾಗಿದೆ ಎಂದು ಕೊಡಗು ಕಾಂಗ್ರೆಸ್ ವಕ್ತಾರೆ ಸರಿತಾ ಪೂಣಚ್ಚ ಶಿಕ್ಷಣ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.ದೇಶವ್ಯಾಪಿ ವ್ಯಾಪಕವಾಗಿ ಹರಡುತ್ತಿರುವ ಕೋವಿಡ್ ನಿಂದ ಮಕ್ಕಳು ಸೇರಿದಂತೆ ಸಾಮಾನ್ಯ ಜನರು ಅತ್ಯಂತ ಸಂಕಷ್ಟದಲ್ಲಿ ಸಿಲುಕಿಕೊಂಡಿದ್ದು ಕೋವಿಡ್ ನಿಯಂತ್ರಣದೊಂದಿಗೆ ಮಕ್ಕಳಿಗೆ ಧೈರ್ಯ ತುಂಬಬೇಕಾದ ಇಲಾಖೆ ಅನಗತ್ಯವಾಗಿ ಮಕ್ಕಳಿಗೆ ಹೆಚ್ಚು ಹೊರೆ ಹೇರುವ ಮೂಲಕ ಮಾನಸಿಕವಾಗಿತೊಂದರೆ ನೀಡುತ್ತಿರುವುದು ಸರಿಯಾದ ಕ್ರಮವಲ್ಲ .ಕೊಡಗು ಜಿಲ್ಲೆಯ ಬಹುತೇಕ ಭಾಗಗಳಲ್ಲಿ ವಿದ್ಯುತ್ ಸಂಪರ್ಕ, ನೆಟ್ ವರ್ಕ್ ಸೇರಿದಂತೆ ಹಲವು ಸಮಸ್ಯೆಗಳನ್ನು ಎದುರಿಸುತ್ತಿರುವ ಸಾಮಾನ್ಯ ಜನರು ಕೂಲಿ ಕೆಲಸವೂ ಇಲ್ಲದೆ ಸಂಕಷ್ಟದಲ್ಲಿದ್ದಾರೆ. ಜಿಲ್ಲೆಯ ಕೆಲವರಿಗೆ ಮೊಬೈಲ್ ಇದ್ದರು ರೀಚಾರ್ಜ್ ಮಾಡಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ .ಕೋವಿಡ್ ಸಂಕಷ್ಟದ ಪರಿಸ್ಥಿತಿಯಲ್ಲಿ ಶಿಕ್ಷಣ ಇಲಾಖೆ ಇಂತಹ ನಿರ್ಧಾರ ತೆಗೆದುಕೊಳ್ಳುವುದು ಸರಿಯಾದ ಕ್ರಮವಲ್ಲ.ಪಿ ಯು ವಿದ್ಯಾರ್ಥಿಗಳಿಗೆ ಪರೀಕ್ಷೆ ಇಲ್ಲ ಎಂದು ಹೇಳಿ ಇದೀಗ ಪರೀಕ್ಷೆ ನಡೆಸುವುದಾಗಿ ಘೋಷಣೆ ಮಾಡಿರುವುದು ವಿದ್ಯಾರ್ಥಿಗಳನ್ನು ಇಕ್ಕಟ್ಟಿಗೆ ಸಿಲುಕಿಸಲು ಮುಂದಾಗಿರುವುದು ಖಂಡನೀಯ ತಮ್ಮ ಸರ್ಕಾರ ಗಂಭೀರವಾಗಿ ಪರಿಗಣಿಸಿ ಶಿಕ್ಷಣ ಇಲಾಖೆಯ ದ್ವಂದ್ವ ನೀತಿ ಗಳಿಗೆ ಕಡಿವಾಣ ಹಾಕುವುದರೊಂದಿಗೆ ಎಲ್ಲಾ ಪರಿಕ್ಷೆಗಳನ್ನು ರದ್ದು ಮಾಡಬೇಕೆಂದು ಒತ್ತಾಯಿಸಿದರು
No comments
Post a Comment