ಕೋವಿಡ್ ನಿಯಂತ್ರಿಸುವಲ್ಲಿ ಸರ್ಕಾರ ವಿಫಲ :ಎ ಎಸ್ ಪೊನ್ನಣ್ಣ, ಮಾಲ್ದಾರೆಯಲ್ಲಿ ಕಿಟ್ ವಿತರಣೆ
ಸಿದ್ದಾಪುರ :ಕೋವಿಡ್ ಲಾಕ್ ಡೌನ್ ಏರುವ ಮೂಲಕ ಜನ ಸಾಮಾನ್ಯರನ್ನು ಸಂಕಷ್ಟಕ್ಕೆ ಸಿಲುಕಿಸಿ ನೆಮ್ಮದಿಯ ಜೀವನ ನಡೆಸಲು ಸಾಧ್ಯವಾಗದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದರುಯಾವುದೇ ಮುಂಜಾಗ್ರತಾ ಕ್ರಮ ಕೈಗೊಳ್ಳದೆ ಕೋವಿಡ್ ನಿಯಂತ್ರಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ರಾಜ್ಯ ಕಾಂಗ್ರೆಸ್ ಕಾನೂನು ಘಟಕದ ಅಧ್ಯಕ್ಷ ಎ ಎಸ್ ಪೊನ್ನಣ್ಣ ಆರೋಪಿಸಿದರು.ಮಾಲ್ದಾರೆ ವಲಯ ಕಾಂಗ್ರೆಸ್ ಸಮಿತಿ ವತಿಯಿಂದ ಗ್ರಾಮದಲ್ಲಿ ಆಶಾ, ಅಂಗನವಾಡಿ ಕಾರ್ಯಕರ್ತರು ಹಾಗೂ ಸಂತ್ರಸ್ತ ಕುಟುಂಬಗಳಿಗೆ ಮಾಸ್ಕ್, ಸ್ಯಾನಿಟೈಸರ್ ,ತರಕಾರಿ ಹಾಗೂ ಆಹಾರ ಪದಾರ್ಥಗಳ ಕಿಟ್ಗಳನ್ನು ವಿತರಿಸಿ ಮಾತನಾಡಿ ಕೊಡಗು ಜಿಲ್ಲೆಯಲ್ಲಿ ಅಧಿಕಾರಿಗಳನ್ನ ಕೆಲಸ ಮಾಡಲು ಬಿಡದೆ ತಮ್ಮ ಹಿಡಿತದಲ್ಲಿಟ್ಟುಕೊಂಡಿರುವ ಜನಪ್ರತಿನಿಧಿಗಳ ಇಚ್ಛಾಶಕ್ತಿ ಕೊರತೆಯಿಂದಲೇ ಕೋವಿಡ್ ಹೆಚ್ಚಾಗಲು ಕಾರಣವಾಗಿದ್ದು ಜನರು ಪ್ರಶ್ನಿಸುವಂತಾಗಿದೆ. ಕಳೆದ ಪ್ರವಾಹ ಹಾಗೂ ಪ್ರಕೃತಿ ವಿಕೋಪ ಸಂದರ್ಭದಲ್ಲಿ ಜಿಲ್ಲೆಯ ಬೆಳೆಗಾರರು, ಕಾರ್ಮಿಕರು, ಸಂತ್ರಸ್ಥರು ಸಂಕಷ್ಟದಲ್ಲಿದ್ದಾರೆ.ವಿಶೇಷ ಪ್ಯಾಕೇಜ್ ಆಗಲಿ ಶಾಶ್ವತ ಪರಿಹಾರವಾಗಲಿ ಇಂದಿಗೂ ಸಿಕ್ಕಿಲ್ಲ ಕಾಡುಪ್ರಾಣಿಗಳ ಭಯದ ನೆರಳಿನಲ್ಲಿ ಕಾರ್ಮಿಕರು ಬೆಳೆಗಾರರು ಸಂಕಷ್ಟದ ಜೀವನ ನಡೆಸುತ್ತಿದ್ದಾರೆ.ಲಾಕ್ ಡೌನ್ ಸಂದರ್ಭದಲ್ಲಿ ಕೃಷಿ ಚಟುವಟಿಕೆಗೆ ಅವಕಾಶ ಇದ್ದರೂ ಜಿಲ್ಲೆಯ ಜನಪ್ರತಿನಿಧಿಗಳು ಪೊಲೀಸರ ಮೇಲೆ ಒತ್ತಡ ಹೇರಿ ಕಾರ್ಮಿಕರು ಹಾಗೂ ರೈತರಿಗೆ ತೊಂದರೆ ಕೊಡುತ್ತಿರುವುದು ಸರಿಯಾದ ಕ್ರಮವಲ್ಲ.ಕೂಲಿ ಕೆಲಸ ಮಾಡಿ ಜೀವನ ನಡೆಸುವ ಅದೆಷ್ಟೋ ಕುಟುಂಬಗಳು ಲಾಕ್ ಡೌನ್ ಸಂಕಷ್ಟದಲ್ಲಿದ್ದಾರೆ.ಫ್ರಂಟ್ ಲೈನ್ ವಾರಿಯರ್ಸ್ ಗಳಾಗಿ ಕೆಲಸ ನಿರ್ವಹಿಸುತ್ತಿರುವ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳನ್ನು ಈಡೇರಿಸದ ಸರ್ಕಾರ ಜನರ ಹಿತ ಕಾಪಾಡುವಲ್ಲಿ ವಿಫಲವಾಗಿದೆ ಎಂದರು ಮಡಿಕೇರಿಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಬೇಕೆಂಬ ಬೇಡಿಕೆ ಕಳೆದ ಹಲವು ವರ್ಷಗಳಿಂದ ಇದ್ದರು ಇದರ ಬಗ್ಗೆ ಗಂಭೀರವಾಗಿ ಪರಿಗಣಿಸದ ಸಂಸದರು ಜಿಲ್ಲೆಯನ್ನ ಎಲ್ಲ ರೀತಿಯಲ್ಲೂ ಕಡೆಗಣಿಸಿದ್ದಾರೆ.ಅಧಿಕಾರ ಇಲ್ಲದಿದ್ದರೂ ಜನರ ಸೇವೆಗೆ ಕಾಂಗ್ರೆಸ್ ಕಾರ್ಯಕರ್ತರು ಸಜ್ಜಾಗಿದ್ದು ಈಗಾಗಲೇ ರಾಜ್ಯದ ನಾನಾ ಭಾಗಗಳಲ್ಲಿ ಆಂಬ್ಯುಲೆನ್ಸ್ ವ್ಯವಸ್ಥೆ ಔಷಧ ಉಪಚಾರಗಳ ವ್ಯವಸ್ಥೆ .ಸಂಕಷ್ಟದಲ್ಲಿರುವವರಿಗೆ ಕಿಟ್ ವಿತರಣೆ ಸೇರಿದಂತೆ ಹಲವು ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಿದ್ದು ಸಂಕಷ್ಟದಲ್ಲಿರುವವರಿಗೆ ಪಕ್ಷ ನೆರವಾಗಲಿದೆ ಎಂದರು.ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಜಿ ಪೂಣಚ್ಚ, ಮಾಲ್ದಾರೆ ಕಾಂಗ್ರೆಸ್ ವಲಯಾಧ್ಯಕ್ಷ ಸಜಿ ತೋಮಸ್,ರಾಜ್ಯ ಕಾಂಗ್ರೆಸ್ ಕಿಸಾನ್ ಘಟಕದ ಕಾರ್ಯದರ್ಶಿ ಗೋಪಾಲಕೃಷ್ಣ,ಕಾಂಗ್ರೆಸ್ ವಕ್ತಾರರಾದ ಟಾಟು ಮೊಣ್ಣಪ್ಪ, ಸಲಾಂ, ಎಸ್ ಸಿ ಘಟಕದ ಜಿಲ್ಲಾಧ್ಯಕ್ಷ ಸತೀಶ್, ವಿರಾಜಪೇಟೆ ಪಟ್ಟಣ ಪಂಚಾಯಿತಿ ಸದಸ್ಯ ರಾಜೇಶ್,ಕಾಂಗ್ರೆಸ್ ಕಿಸಾನ್ ಘಟಕದ ವಲಯ ಅಧ್ಯಕ್ಷ ಮೊಹಮ್ಮದ್ ಅಲಿ, ಪ್ರಮುಖರಾದ ಕಿರಣ್, ನಿಯಾಜ್, ಸತೀಶ್, ಇಂದಿರಾ,ಪುಷ್ಪಾ , ಬಾವಾ ಮಾಲ್ದಾರೆ ಸೇರಿದಂತೆ ಮತ್ತಿತರರು ಹಾಜರಿದ್ದರು.
No comments
Post a Comment