ಮಡಿಕೇರಿ-ಸಂಪಾಜೆ ರಾಷ್ಟ್ರೀಯ ಹೆದ್ದಾರಿ ಮಾರ್ಗ ರಸ್ತೆ ಬಿರುಕು - ಸಂಸದ ಪ್ರತಾಪ್ ಸಿಂಹ ಭೇಟಿ

No comments

  ಮಡಿಕೇರಿ (Times Of Coorg):-ಮಡಿಕೇರಿ-ಸಂಪಾಜೆ ಹೆದ್ದಾರಿ ಮಾರ್ಗದ ಮದೆನಾಡು ಬಳಿ ರಸ್ತೆ ಬಿರುಕು ಬಿಟ್ಟಿದ್ದ ಪ್ರದೇಶಕ್ಕೆ ಸಂಸದರಾದ ಪ್ರತಾಪ್ ಸಿಂಹ ಮತ್ತು ಶಾಸಕರಾದ ಕೆ.ಜಿ.ಬೋಪಯ್ಯ ಅವರು ಶನಿವಾರ ಭೇಟಿ ನೀಡಿ ವೀಕ್ಷಿಸಿದರು.  

 ಕಾಟಗೇರಿ ಬಳಿ ಭೂ ಒತ್ತಡದಿಂದ ಚರಂಡಿ ಹಾಳಾಗಿರುವುದನ್ನು ವೀಕ್ಷಿಸಿದರು. ಬಳಿಕ ಮಾತನಾಡಿದ ಸಂಸದರಾದ ಪ್ರತಾಪ್ ಸಿಂಹ ಅವರು ಕಳೆದ ಮೂರು ವರ್ಷಗಳಿಂದ ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಒಂದಲ್ಲ ಒಂದು ರೀತಿಯಲ್ಲಿ ಪ್ರಾಕೃತಿಕ ವಿಕೋಪ ಉಂಟಾಗುತ್ತಿದೆ. ಆದ್ದರಿಂದ ಈ ಭಾರಿ ಅಂತಹ ಅವಘಡಗಳು ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸುವ ನಿಟ್ಟಿನಲ್ಲಿ ಮಡಿಕೇರಿ ಸಂಪಾಜೆ ಮಾರ್ಗದ 18 ಕಡೆ ತಡೆಗೋಡೆ ನಿರ್ಮಿಸಲು ಉದ್ದೇಶಿಸಿಲಾಗಿತ್ತು, ಆದರೆ ಕಳೆದ ಜೂನ್ ತಿಂಗಳಲ್ಲಿ ವ್ಯಾಪಕ ಮಳೆಯಾದ ಹಿನ್ನಲೆ ಇನ್ನೂ ಹಲವು ಕಡೆ ತಡೆಗೋಡೆ ನಿರ್ಮಿಸಬೇಕಿದೆ. ಕೆಲವು ಕಡೆ ರಸ್ತೆ ಬಿರುಕು ಬಿಟ್ಟಿದೆ. ಹಾಗೆಯೆ ಚರಂಡಿ ಹಾಳಾಗಿದ್ದು, ಇದನ್ನು ಸರಿಪಡಿಸಬೇಕಿದೆ ಎಂದು ಸಂಸದರು ಹೇಳಿದರು. 

      ಜೊತೆಗೆ ಇನ್ನೂ ಹಲವು ಕಡೆ ತಡೆಗೊಡೆ ನಿರ್ಮಿಸಲು ಶಾಸಕರಾದ ಕೆ.ಜಿ ಬೋಪಯ್ಯ ಅವರು ಸಲಹೆ ಮಾಡಿದ್ದು, ಡಿಪಿಆರ್ ನಡೆಯುತ್ತಿದೆ ಎಂದು ಪ್ರತಾಪ್ ಸಿಂಹ ಅವರು ಹೇಳಿದರು. 

      ಮದೆನಾಡು ಮುಂಭಾಗ ಭೂಮಿ ಒಳಭಾಗದಲ್ಲಿ ನೀರು ಸ್ಪೋಟವಾಗುತ್ತಿರುವ ಹಿನ್ನೆಲೆ ತಜ್ಞರಿಂದ  ಮಣ್ಣು ಪರೀಕ್ಷೆ ಮಾಡಿಸಿ ರಸ್ತೆ ಹಾನಿಯಾಗದಂತೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಂಸದರು ತಿಳಿಸಿದರು.  

 ಶಾಸಕರಾದ ಕೆ.ಜಿ.ಬೋಪಯ್ಯ, ಪಶ್ಚಿಮ ಘಟ್ಟ ಕಾರ್ಯಪೆಡೆ ಅಧ್ಯಕ್ಷರಾದ ಶಾಂತೆಯಂಡ ರವಿಕುಶಾಲಪ್ಪ, ಮಡಿಕೇರಿ ನಗರಾಭಿವೃದ್ಧಿ ಅಧ್ಯಕ್ಷರಾದ ರಮೇಶ್ ಹೊಳ್ಳ, ರಾಷ್ಟ್ರೀಯ ಹೆದ್ದಾರಿ ವಿಭಾಗ ಕಾರ್ಯಪಾಲಕ ಎಂಜಿನಿಯರ್ ಜಿ.ಎನ್.ಹೆಗ್ಡೆ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಚಂದ್ರಪ್ಪ, ಪ್ರಮುಖರಾದ ರಾಬಿನ್ ದೇವಯ್ಯ, ಉಮೇಶ್ ಸುಬ್ರಮಣಿ, ಅಪ್ಪಣ್ಣ, ಕವನ್, ಶರಿನ್ ಮತ್ತಿತರರು ಇದ್ದರು.



No comments

Post a Comment