ಮಡಿಕೇರಿ (Times Of Coorg):-ಕೋವಿಡ್ ಲಸಿಕಾ ಅಭಿಯಾನವು ಆಗಸ್ಟ್, 06 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಜಿಲ್ಲೆಯ ವಿವಿಧ ಕಡೆಗಳಲ್ಲಿ ನಡೆಯಲಿದೆ. ಮಡಿಕೇರಿ ನಗರದ ಕಾವೇರಿ ಕಲಾಕ್ಷೇತ್ರದಲ್ಲಿ 100 ಮಂದಿಗೆ, ಓಂಕಾರ ಸದನದಲ್ಲಿ 100 ಮಂದಿಗೆ, ನಾಪೋಕ್ಲು ಸಮುದಾಯ ಆರೋಗ್ಯ ಕೇಂದ್ರದಲ್ಲಿ 30 ಮಂದಿಗೆ, ಚೆಟ್ಟಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 70 ಮಂದಿಗೆ, ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 100 ಮಂದಿಗೆ, ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರದಲ್ಲಿ 100 ಮಂದಿಗೆ, ಸೋಮವಾರಪೇಟೆ ತಾಲ್ಲೂಕು ಆಸ್ಪತ್ರೆಯಲ್ಲಿ 300 ಮಂದಿಗೆ, ವಿ.ಬಾಡಗ ಗ್ರಾಮದಲ್ಲಿ 100 ಮಂದಿಗೆ, ಗೋಣಿಕೊಪ್ಪ ಸಮುದಾಯ ಆರೋಗ್ಯ ಕೇಂದ್ರದಲ್ಲಿ 200 ಮಂದಿಗೆ ಮತ್ತು ವಿರಾಜಪೇಟೆ ತಾಲ್ಲೂಕು ಆಸ್ಪತ್ರೆಯಲ್ಲಿ 400 ಮಂದಿಗೆ ಕೋವ್ಯಾಕ್ಸಿನ್ ಲಸಿಕೆ ನೀಡಲಾಗುತ್ತದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್ ಅವರು ತಿಳಿಸಿದ್ದಾರೆ.
ಆರೋಗ್ಯ ಸಂಸ್ಥೆಯಲ್ಲಿ ಲಭ್ಯವಿರುವ ಕೋವ್ಯಾಕ್ಸಿನ್ ಲಸಿಕೆಯನ್ನು ಎರಡನೇ ಬಾರಿಗೆ ಬಾಕಿ ಇರುವ ಫಲಾನುಭವಿಗಳಿಗೆ ನೀಡಲು ತಿಳಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್ ಹೇಳಿದ್ದಾರೆ.

No comments
Post a Comment