ಮಡಿಕೇರಿ ಆ.25(web@timesofcoorg):-ಆಗಸ್ಟ್-29 ರಂದು ರಾಷ್ಟ್ರೀಯ ಕ್ರೀಡಾ ದಿನಾಚರಣೆ ಪ್ರಯುಕ್ತ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖಾ ವತಿಯಿಂದ ಕ್ರೀಡಾ ದಿನಾಚರಣೆಯನ್ನು ಸರ್ಕಾರದ ಆದೇಶದಂತೆ ಸರಳವಾಗಿ ಆಚರಿಸಲಾಗುತ್ತಿದೆ.
ಆ ದಿಸೆಯಲ್ಲಿ ಕೊಡಗು ಜಿಲ್ಲಾ ಮಟ್ಟದ ಷಟಲ್ ಬ್ಯಾಡ್ಮಿಂಟನ್, ಟೇಬಲ್ ಟೆನ್ನಿಸ್, ಸ್ಕ್ವಾಷ್ ಹಾಗೂ ಹಾಕಿ ಪಂದ್ಯಾವಳಿ ಯನ್ನು ಆಗಸ್ಟ್, 27 ರಂದು ಬೆಳಗ್ಗೆ 10 ಗಂಟೆಗೆ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿರುವ ಒಳಾಂಗಣ ಕ್ರೀಡಾಂಗಣ ಹಾಗೂ ಪೊನ್ನಂಪೇಟೆಯ ಹಾಕಿ ಟರ್ಫ್‍ನಲ್ಲಿ ಏರ್ಪಡಿಸಲಾಗಿದೆ.
ಟೇಬಲ್ ಟೆನ್ನಿಸ್ ಪಂದ್ಯಾವಳಿ:-ಸಾರ್ವಜನಿಕ ಪುರುಷ ಹಾಗೂ ಮಹಿಳೆಯರಿಗೆ- ಡಬಲ್ಸ್, ಷಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿ ಸಾರ್ವಜನಿಕ ಪುರುಷ ಹಾಗೂ ಮಹಿಳೆಯರಿಗೆ- ಡಬಲ್ಸ್, ಸ್ಕ್ವಾಷ್ ಸಾರ್ವಜನಿಕ ಪುರುಷ ಹಾಗೂ ಮಹಿಳೆಯರಿಗೆ, ಹಾಕಿ ಸಾರ್ವಜನಿಕ ಪುರುಷ ಹಾಗೂ ಮಹಿಳೆಯರಿಗೆ ಪೊನ್ನಂಪೇಟೆಯಲ್ಲಿರುವ ಹಾಕಿ ಟರ್ಫ್‍ನಲ್ಲಿ ನಡೆಯಲಿದೆ.
ಷಟಲ್ ಬ್ಯಾಡ್ಮಿಂಟನ್, ಟೇಬಲ್ ಟೆನ್ನಿಸ್, ಸ್ಕ್ವಾಷ್ ಆಟಗಾರರು ರಾಕೇಟ್ ಹಾಗೂ ಟಿ.ಟಿ.ಬ್ಯಾಟ್‍ಅನ್ನು ತಾವೇ ತರತಕ್ಕದ್ದು ಹಾಗೂ ಭಾಗವಹಿಸುವ ಕ್ರೀಡಾಪಟುಗಳಿಗೆ ಯಾವುದೇ ರೀತಿಯ ಪ್ರವೇಶ ಶುಲ್ಕ ಇರುವುದಿಲ್ಲ.
ಈ ಪಂದ್ಯಾವಳಿಗಳಲ್ಲಿ ಭಾಗವಹಿಸುವ ಕ್ರೀಡಾಪಟುಗಳು ಹೆಚ್ಚಿನ ಮಾಹಿತಿಗೆ ಈ ಕಚೇರಿಯ ದೂ.ಸಂ.08272-228985 ನ್ನು ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಗುರುಸ್ವಾಮಿ ಅವರು ಕೋರಿದ್ದಾರೆ.
No comments
Post a Comment