ಮಡಿಕೇರಿ ಆ.18(web@timesofcoorg):-ಜಿಲ್ಲೆಯಲ್ಲಿ ಬುಧವಾರ 83 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ. 68 ಆರ್‍ಟಿಪಿಸಿಆರ್ ಮತ್ತು 15 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಮಡಿಕೇರಿ ತಾಲೂಕಿನಲ್ಲಿ 37 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 35 ಪ್ರಕರಣಗಳು ಆರ್‍ಟಿಪಿಸಿಆರ್ ಮತ್ತು 02 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಸೋಮವಾರಪೇಟೆ ತಾಲೂಕಿನಲ್ಲಿ 23 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ 14 ಪ್ರಕರಣಗಳು ಆರ್‍ಟಿಪಿಸಿಆರ್ ಮತ್ತು 09 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ವಿರಾಜಪೇಟೆ ತಾಲೂಕಿನಲ್ಲಿ 23 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 19 ಪ್ರಕರಣಗಳು ಆರ್‍ಟಿಪಿಸಿಆರ್ ಮತ್ತು 04 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 32,904 ಆಗಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 66 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಒಟ್ಟು 31,942 ಮಂದಿ ಗುಣಮುಖರಾಗಿದ್ದಾರೆ. 555 ಸಕ್ರಿಯ ಪ್ರಕರಣಗಳಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ಸಾವು ಉಂಟಾಗಿಲ್ಲ, ಒಟ್ಟು 407 ಮರಣ ಪ್ರಕರಣಗಳು ವರದಿಯಾಗಿದೆ. ಕಂಟೈನ್‍ಮೆಂಟ್ ವಲಯಗಳ ಸಂಖ್ಯೆ 84 ಆಗಿದೆ. ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರ ಶೇ.1.74 ಆಗಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ತಿಳಿಸಿದ್ದಾರೆ.
No comments
Post a Comment