ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮದಿಂದ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

No comments


      ಮಡಿಕೇರಿ ಆ.03(Times Of Coorg):-2021-22 ನೇ ಸಾಲಿನ ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮದಿಂದ ಪರಿಶಿಷ್ಟ ಜಾತಿಯ ಮಾದಿಗ ಮತ್ತು ಸಂಬಂಧಿತ ಸಮುದಾಯಗಳ ಆರ್ಥಿಕ ಅಭಿವೃದ್ಧಿಗಾಗಿ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕಾಗಿ ಅರ್ಜಿ  ಆಹ್ವಾನಿಸಲಾಗಿದೆ.  

      ಸ್ವಯಂ ಉದ್ಯೋಗ ಕಾರ್ಯಕ್ರಮಗಳು, ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ, ಮೈಕ್ರೋ ಕ್ರೆಡಿಟ್ (ಪ್ರೇರಣಾ ಮಹಿಳಾ ಸ್ವ-ಸಹಾಯ  ಗುಂಪುಗಳಿಗೆ) ಯೋಜನೆ(ನೋಂದಾಯಿತ ಸ್ವ-ಸಹಾಯ ಮಹಿಳಾ ಸಂಘಗಳು), ಭೂ ಒಡೆತನ ಯೋಜನೆ, ಸಮಗ್ರ ಗಂಗಾ ಕಲ್ಯಾಣ ಯೋಜನೆ. ಫಲಾಪೇಕ್ಷಿಗಳು ಆನ್‍ಲೈನ್ ಮೂಲಕ ಅರ್ಜಿ ಮತ್ತು ದಾಖಲಾತಿಗಳನ್ನು ನಿಗಮದ ವೆಬ್‍ಸೈಟ್https://adijambava.online   ಮೂಲಕ ಅಪ್‍ಲೋಡ್ ಮಾಡಿ ಸೆಪ್ಟೆಂಬರ್, 02 ರೊಳಗೆ ನಿಗಮದ ಜಿಲ್ಲಾ ಕಚೇರಿಗೆ ಸಲ್ಲಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

       ಹೆಚ್ಚಿನ ಮಾಹಿತಿಗೆ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ  ಆದಿ ಜಾಂಬವ ಅಭಿವೃದ್ಧಿ ನಿಗಮ ಮಡಿಕೇರಿ, ಕೊಡಗು ಜಿಲ್ಲೆ -571201. ದೂ.ಸಂ. 08272-228857 ನ್ನು ಸಂಪರ್ಕಿಸಬಹುದು ಎಂದು  ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

No comments

Post a Comment