ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಧ್ವಜ ಹಾಗೂ ತ್ರಿವರ್ಣ ಧ್ವಜವಿರುವ ಮಾಸ್ಕ್ ಮಾರಾಟ ಮತ್ತು ಬಳಕೆ ನಿಷೇಧ

No comments

ಮಡಿಕೇರಿ (Times Of Coorg):-ಇದೇ ಆಗಸ್ಟ್ 15 ರಂದು ಸ್ವಾತಂತ್ರ್ಯ ದಿನಾಚರಣೆ ಜರುಗಲಿದೆ. ಈ ಸಂದರ್ಭದಲ್ಲಿ ರಾಷ್ಟ್ರಧ್ವಜಕ್ಕೆ ಇರುವ ಗೌರವವನ್ನು ಕಾಯ್ದುಕೊಳ್ಳುವುದು ನಮ್ಮೆಲ್ಲರ ಕರ್ತವ್ಯವಾಗಿದೆ. 

ಸ್ವಾತಂತ್ರ್ಯ ದಿನಾಚರಣೆ ಸಮೀಪಿಸುತ್ತಿರುವ ಈ ಸಂದರ್ಭದಲ್ಲಿ ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಧ್ವಜಗಳ ಮಾರಾಟ ಹಾಗೂ ತ್ರಿವರ್ಣ ಧ್ವಜವಿರುವ ಮಾಸ್ಕ್‍ಗಳ ಮಾರಾಟ ಹಾಗೂ ಸಾರ್ವಜನಿಕರು ಇದರ ಬಳಕೆಯನ್ನು ನಿಷೇಧಿಸಿದೆ. ಮಾರಾಟಗಾರರು ಹಾಗೂ ಬಳಕೆದಾರರು ರಾಷ್ಟ್ರ ಗೌರವವನ್ನು ಕಾಪಾಡುವ ನಿಟ್ಟಿನಲ್ಲಿ ನಗರಸಭೆಯೊಂದಿಗೆ ಕೈಜೋಡಿಸುವಂತೆ ಪೌರಾಯುಕ್ತರಾದ ಎಸ್.ವಿ.ರಾಮದಾಸ್ ಅವರು ಮನವಿ ಮಾಡಿದ್ದಾರೆ. 

ನಿಯಮ ಉಲ್ಲಂಘಿಸುವುದು ಕಂಡುಬಂದಲ್ಲಿ ಕರ್ನಾಟಕ ಪೌರಸಭೆ ಕಾಯ್ದೆ 1964ರ ಅಧಿನಿಯಮ 256 ರಡಿ ಕ್ರಮವಹಿಸಿ ಪರವಾನಗೆಯನ್ನು ರದ್ದುಪಡಿಸಲಾಗುವುದು ಎಂದು ನಗರಸಭೆ ಪೌರಾಯುಕ್ತರು ತಿಳಿಸಿದ್ದಾರೆ.

No comments

Post a Comment