ಮಡಿಕೇರಿ ಆ.30(web@timesofcoorg):-ಪಡಿತರ ಚೀಟಿ ಕುಟುಂಬದ ಸದಸ್ಯರುಗಳ ಇ-ಕೆವೈಸಿ (ಜೀವ ಮಾಪಕ ಮರು ದೃಡೀಕರಣ) ಕಾರ್ಯವನ್ನು ಮಾಡಲು ಸರ್ಕಾರ ಮತ್ತೊಮ್ಮೆ ಅವಕಾಶ ಕಲ್ಪಿಸಿದೆ. ಪಡಿತರ ಚೀಟಿದಾರರು ತಮ್ಮ ವ್ಯಾಪ್ತಿಯ ನ್ಯಾಯಬೆಲೆ ಅಂಗಡಿಗಳಲ್ಲಿ ಸೆಪ್ಟೆಂಬರ್, 01 ರಿಂದ 10 ರವರೆಗೆ ಇ-ಕೆವೈಸಿ(ಜೀವ ಮಾಪಕ ಮರು ದೃಡೀಕರಣ)ಯನ್ನು ಸಂಗ್ರಹಿಸಲಾಗುತ್ತದೆ.
ಪ್ರಸ್ತುತ ಸರ್ಕಾರದ ಆದೇಶದಂತೆ ಇ-ಕೆವೈಸಿ(ಜೀವ ಮಾಪಕ ಮರು ದೃಡೀಕರಣ) ಕಾರ್ಯವನ್ನು ಮತ್ತೆ ಪ್ರಾರಂಭಿಸಲಾಗಿದ್ದು, ಈ ಹಿಂದೆ ಇ-ಕೈವೈಸಿ ಮಾಡಿಸಿರದ ಅಂತ್ಯೋದಯ ಅನ್ನಯೋಜನೆ, (ಎಎವೈ) ಆದ್ಯತಾ ಪಡಿತರ ಚೀಟಿ)ಬಿಪಿಎಲ್, ಮತ್ತು ಆದ್ಯತೇತರ ಪಡಿತರ ಚೀಟಿಗಳಲ್ಲಿ(ಎಪಿಎಲ್) ಸೇರ್ಪಡೆಗೊಂಡಿರುವ ಸದಸ್ಯರುಗಳು ಕೂಡಲೆ ತಮ್ಮ ವ್ಯಾಪ್ತಿಯ ನ್ಯಾಯಬೆಲೆ ಅಂಗಡಿಗೆ ತೆರಳಿ ತಮ್ಮ ಬೆರಳಚ್ಚನ್ನು ನೀಡಿ ಇ-ಕೆವೈಸಿಯನ್ನು(ಜೀವ ಮಾಪಕ ಮರು ದೃಡೀಕರಣ) ಮಾಡಿಸುವಂತೆ ಆಹಾರ ಇಲಾಖೆ ಉಪ ನಿರ್ದೇಶಕರಾದ ಗೌರವ್ ಕುಮಾರ್ ಶೆಟ್ಟಿ ಅವರು ಕೋರಿದ್ದಾರೆ.
ಎಎವೈ, ಆದ್ಯತಾ, ಆದ್ಯತೇತರ ಪಡಿತರ ಚೀಟಿಗಳಲ್ಲಿ ಸೇರ್ಪಡೆಗೊಂಡಿರುವ ಎಲ್ಲಾ ಸದಸ್ಯರು ಈ ರೀತಿ ಇ-ಕೆವೈಸಿಯನ್ನು ಕಡ್ಡಾಯವಾಗಿ ಮಾಡಿಸುವುದು. ಉದ್ಯೋಗದ/ವಿಧ್ಯಾಭ್ಯಾಸದ ಸಲುವಾಗಿ ಹಾಗೂ ಇತರೆ ಕಾರಣಗಳಿಂದ ಹೊರಗಿನ ಪ್ರದೇಶದಲ್ಲಿ ನೆಲೆಸಿರುವ ಪಡಿತರ ಚೀಟಿ ಸದಸ್ಯರುಗಳು ನಿಗಧಿತ ದಿನಾಂಕಗಳಂದು ಬಂದು ತಮ್ಮ ನ್ಯಾಯಬೆಲೆ ಅಂಗಡಿಗೆ ತೆರಳಿ ಇ-ಕೆವೈಸಿ (ಜೀವ ಮಾಪಕ ಮರು ದೃಡೀಕರಣ) ಮಾಡಿಸುವುದು. 6 ವರ್ಷದೊಳಗೆ ಮಕ್ಕಳ ಆಧಾರ್ ಕಾರ್ಡ್ ಮಾಡಿಸಿದ್ದಲ್ಲಿ ಅಂತಹ ಮಕ್ಕಳ ಬೆರಳಚ್ಚು ಅಪ್‍ಡೇಟ್ ಆಗಿರುವುದಿಲ್ಲ. ಇದರಿಂದಾಗಿ ಇ-ಕೆಎವೈಸಿ ಮಾಡಿಸಲು ಸಾದ್ಯವಾಗುವುದಿಲ್ಲ. ಆದ್ದರಿಂದ ಬೆರಳಚ್ಚು ಅಪ್‍ಡೇಟ್ ಆಗದಂತಹ ಮಕ್ಕಳನ್ನು ಆಧಾರ್ ಸೆಂಟರ್‍ಗೆ ಕರೆದು ಬೆರಳಚ್ಚು ಅಪ್‍ಡೇಟ್ ಮಾಡಬೇಕು. ನಂತರವೇ ಪಡಿತರ ಚೀಟಿಯ ಇ-ಕೆವೈಸಿ ಮಾಡಿಸುವುದು. ಇ-ಕೆವೈಸಿ (ಜೀವ ಮಾಪಕ ಮರು ದೃಡೀಕರಣ) ಕಾರ್ಯವನ್ನು ಕೇವಲ ಸಂಬಂಧಿಸಿದ ನ್ಯಾಯಬೆಲೆ ಅಂಗಡಿಗಳಲ್ಲಿಯೇ ಮಾಡತಕ್ಕದ್ದು.
ಈ ರೀತಿ ಬೆರಳಚ್ಚು ನೀಡಿ ಇ-ಕೆವೈಸಿ (ಜೀವ ಮಾಪಕ ಮರು ದೃಡೀಕರಣ) ಮಾಡಿಸಲು ಯಾವುದೇ ಶುಲ್ಕ ಇರುವುದಿಲ್ಲ. ಪಡಿತರ ಚೀಟಿದಾರರು ಯಾವುದೇ ಹಣ ನೀಡುವಂತಿಲ್ಲ. ಹಣ ತೆಗೆದುಕೊಂಡಲ್ಲಿ ತಾಲ್ಲೂಕು ಆಹಾರ ಕಚೇರಿ/ಉಪ ನಿರ್ದೇಶಕರ ಕಚೇರಿಗೆ ದೂರು ನೀಡಬಹುದು. ಆದ್ದರಿಂದ ಜಿಲ್ಲೆಯ ಎಲ್ಲಾ ವರ್ಗದ ಪಡಿತರ ಚೀಟಿಗಳ ಕುಟುಂಬದ ಸದಸ್ಯರುಗಳು ತಮ್ಮ ವ್ಯಾಪ್ತಿಯ ನ್ಯಾಯಬೆಲೆ ಅಂಗಡಿಗೆ ತೆರಳಿ ಬೆರಳಚ್ಚನ್ನು ನೀಡಿ ಇ-ಕೈವೈಸಿ ಕಾರ್ಯವನ್ನು (ಜೀವ ಮಾಪಕ ಮರು ದೃಡೀಕರಣ) ಮಾಡುವಂತೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕರಾದ ಗೌರವ್ ಕುಮಾರ್ ಶೆಟ್ಟಿ ಅವರು ಕೋರಿದ್ದಾರೆ.
No comments
Post a Comment