ನಾಪೋಕ್ಲುವಿನಲ್ಲಿ ಕೊರೋನಾ ನಿಯಂತ್ರಣಕ್ಕೆ ಗ್ರಾಮ ಪಂಚಾಯಿತಿಯ ವಿಭಿನ್ನ ಕ್ರಮ

No comments

ವರದಿ :ಝಕರಿಯ ನಾಪೋಕ್ಲು

ನಾಪೋಕ್ಲು (web@timesofcoorg): ನಾಪೋಕ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೊರೋನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಇದನ್ನು ನಿಯಂತ್ರಿಸಲು ಗ್ರಾಮಪಂಚಾಯಿತಿಯಲ್ಲಿ ನಡೆದ ಟಾಸ್ಕ್ ಫೋರ್ಸ್ ಸಭೆಯಲ್ಲಿ ಕಟ್ಟುನಿಟ್ಟಿನ ತೀರ್ಮಾನವನ್ನು ಕೈಗೊಳ್ಳಲಾಯಿತು.

ಸಂತೆ ದಿನವಾದ ಸೋಮವಾರ ದಂದು ಮಾರುಕಟ್ಟೆಗೆ ಬರುವಂತಹ ಜನರು ಕೋವಿಡ್ ಪರೀಕ್ಷೆ ಮಾಡಿಸದೇ ಇದ್ದಲ್ಲಿ ಅಂತವರನ್ನು ಮಾರುಕಟ್ಟೆಆವರಣದಲ್ಲಿಯೇ ಕೋವಿಡ್ ಪರೀಕ್ಷೆ ಮಾಡಿಸುವ ವ್ಯವಸ್ಥೆಯನ್ನು ಕಲ್ಪಿಸಲಾಗುವುದು ಎಂದು ಟಾಸ್ಕ್ ಫೋರ್ಸ್ ಸಭೆಯಲ್ಲಿ ತೀರ್ಮಾನಿಸಲಾಯಿತು.


ಅಲ್ಲದೇ ಈಗಾಗಲೇ ನಾಪೋಕ್ಲು ವಿಭಾಗದಲ್ಲಿ ಅಸ್ಸಾಂ ಕೂಲಿಕಾರ್ಮಿಕರು ತೋಟಗಳಲ್ಲಿ ಬಂದು ಸೇರಿಕೊಂಡಿದ್ದು ಅಂತಹ ತೋಟದ ಮಾಲೀಕರು ಕೂಡಲೇ ಅವರ ಮಾಹಿತಿಯನ್ನು ನಾಪೋಕ್ಲು ಪೊಲೀಸ್ ಠಾಣೆ ಮತ್ತು ನಾಪೋಕ್ಲು ಗ್ರಾಮ ಪಂಚಾಯಿತಿಗೆ ನೀಡುವಂತೆ ಮತ್ತು ಅವರನ್ನು ಕಡ್ಡಾಯವಾಗಿ ಕೋವಿಡ್ ಪರೀಕ್ಷೆಗೆ ಒಳಪಡಿಸುವಂತೆಯೂ ತಪ್ಪಿದರೆ ಅಂತಹ ತೋಟದ ಮಾಲೀಕರ ವಿರುದ್ಧ ಕಾನೂನು ರೀತಿಯ ಕ್ರಮ ಕೈಗೊಳ್ಳುವಂತೆ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.

ಅದರಂತೆ ನಾಪೋಕ್ಲು ಪಟ್ಟಣದಲ್ಲಿರುವ ಅಂಗಡಿ ಮಾಲೀಕರು ಮತ್ತು ಅಂಗಡಿಯಲ್ಲಿ ಕೆಲಸ ಮಾಡುವಂತಹ ಕಾರ್ಮಿಕರು ಹಾಗೂ ವಾಹನ ಚಾಲಕರು, ಹೊರ ರಾಜ್ಯ ಹೊರ ಜಿಲ್ಲೆಗಳಿಂದ ಆಗಮಿಸಿದವರು,  ಕಡ್ಡಾಯವಾಗಿ ಕೋವಿಡ್ ಪರೀಕ್ಷೆಯನ್ನು ಮಾಡಿಸಿ ಕೊಂಡಿರಬೇಕು ಇದನ್ನು ಸೋಮವಾರದಂದು ಗ್ರಾಮ ಪಂಚಾಯಿತಿಯ ಟಾಸ್ಕ್ ಫೋರ್ಸ್ ಸಮಿತಿಯವರು ಪರಿಶೀಲನೆ ನಡೆಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಅಲ್ಲದೆ ನಾಪೋಕ್ಲು ಪಟ್ಟಣಕ್ಕೆ ಬರುವಂತಹ ಪ್ರತಿಯೊಬ್ಬರೂ ಮಾಸ್ಕ್ ಹಾಗೂ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು ತಪ್ಪಿದರೆ ಅಂತವರ ವಿರುದ್ಧ ಪೊಲೀಸ್ ಇಲಾಖೆ ಮತ್ತು ಪಂಚಾಯತಿ ಅಧಿಕಾರಿಗಳಿಂದ ದಂಡ ವಿಧಿಸಲಾಗುವುದು ಎಂದು ಸಭೆಯಲ್ಲಿ ತಿಳಿಸಲಾಯಿತು.

ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷೆ  ಎಚ್.ಎಸ್.ಪಾರ್ವತಿ  ವಹಿಸಿದ್ದರು.ಸಭೆಯಲ್ಲಿ ಟಾಸ್ಕ್ ಫೋರ್ಸ್ ಸಮಿತಿಯ  ಪೊಲೀಸ್ ಇಲಾಖೆಯ ಅಧಿಕಾರಿಗಳು , ಕಂದಾಯ ಇಲಾಖೆಯ ಅಧಿಕಾರಿಗಳು ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಗ್ರಾಮ ಪಂಚಾಯತಿಯ ಎಲ್ಲಾ ಸದಸ್ಯರು, ಪಂಚಾಯತಿಯ ಸಿಬ್ಬಂದಿ ವರ್ಗದವರು ಹಾಜರಿದ್ದರು.

No comments

Post a Comment