ಮಡಿಕೇರಿ ಆ.31(web@timesofcoorg):-ನಗರೋತ್ಥಾನ 3 ನೇ ಹಂತ ಹಾಗೂ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಕಾಮಗಾರಿಗಳ ಪ್ರಗತಿಯನ್ನು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಮಂಗಳವಾರ ಪರಿಶೀಲಿಸಿದರು.
ಹಾಗೆಯೇ ಮಡಿಕೇರಿ ನಗರಕ್ಕೆ ಕುಡಿಯುವ ನೀರು ಪೂರೈಕೆಯಾಗುವ ಕುಂಡಾಮೇಸ್ತ್ರಿ ಹಾಗೂ ಕೂಟುಹೊಳೆ ಯೋಜನಾ ಕಾಮಗಾರಿಯನ್ನು ವೀಕ್ಷಿಸಿದರು.
ಬಳಿಕ ಮಾತನಾಡಿದ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ನಗರೋತ್ಥಾನ ಮೂರನೇ ಹಂತದ ಕಾಮಗಾರಿಗಳು ಹಾಗೂ ಮಡಿಕೇರಿ ನಗರಕ್ಕೆ ಕುಡಿಯುವ ನೀರು ಪೂರೈಸುವ ಕಾಮಗಾರಿಗಳು ಪ್ರಗತಿಯಲ್ಲಿದ್ದು, ಆದಷ್ಟು ಶೀóಘ್ರ ಕಾಮಗಾರಿ ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಎಂಜಿನಿಯರ್‍ಗಳಿಗೆ ಸೂಚಿಸಿದರು.
ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವತಿಯಿಂದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದ ಬಳಿ 7.5 ಲಕ್ಷ ಲೀಟರ್ ನೀರಿನ ಟ್ಯಾಂಕ್ ನಿರ್ಮಾಣ ಕಾಮಗಾರಿಯನ್ನು ಪರಿಶೀಲಿಸಿದರು.
ನಗರಸಭೆ ವ್ಯಾಪ್ತಿಯ ಸಂಪಿಗೆಕಟ್ಟೆ ರಸ್ತೆಯಿಂದ ಬನ್ನಿಮಂಟಪದವರೆಗೆ ಚರಂಡಿ ಅಭಿವೃದ್ದಿ ಕಾಮಗಾರಿ ಹಾಗೂ ರಸ್ತೆ ಅಭಿವೃದ್ದಿ ಕಾಮಗಾರಿಯನ್ನು ಪರಿಶೀಲಿಸಿ, ತ್ವರಿತವಾಗಿ ಕಾಮಗಾರಿ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು.
ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ವತಿಯಿಂದ ಉಕ್ಕುಡ ರಸ್ತೆಯಲ್ಲಿ ನಿರ್ಮಾಣವಾಗುತ್ತಿರುವ 12.5 ಲಕ್ಷ ಲೀಟರ್ ನೀರಿನ ಟ್ಯಾಂಕ್ ನಿರ್ಮಾಣ ಕಾಮಗಾರಿ ಪರಿಶೀಲನೆ ಮಾಡಿದರು.
ನಗರಸಭಾ ವ್ಯಾಪ್ತಿಯ ಮಹದೇವಪೇಟೆ ಇಂಟರ್ ಲಾಕ್ ಮತ್ತು ಕವರ್‍ಸ್ಲಾಬ್ ಅಳವಡಿಕೆ ಕಾಮಗಾರಿ ಹಾಗೂ ನಗರಸಭಾ ವ್ಯಾಪ್ತಿಯ ಇಂದಿರಾ ಗಾಂಧಿ ವೃತ್ತದಲ್ಲಿ ಕಾಂಕ್ರೀಟೀಕರಣ ಕಾಮಗಾರಿ ವೀಕ್ಷಿಸಿದರು. ನಂತರ ನಗರಸಭಾ ಪುಟಾಣಿ ನಗರದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ ಪ್ರಗತಿ ಬಗ್ಗೆ ಮಾಹಿತಿ ಪಡೆದರು.
ನಗರಾಸಭಾ ವ್ಯಾಪ್ತಿಯ ರಾಣಿಪೇಟೆ ತಡೆಗೋಡೆ ನಿರ್ಮಾಣ (ಸುಬ್ಬಮ್ಮ ಮತ್ತು ಶೇಷಮ್ಮ ಮನೆಯ ಹತ್ತಿರ) ಹಾಗೂ ನಗರಸಭಾ ವ್ಯಾಪ್ತಿಯ ರಾಜಾಸೀಟು ರಸ್ತೆಯಿಂದ ಇಂದಿರಾ ಕ್ಯಾಂಟೀನ್ ವರೆಗೆ ರಸ್ತೆ ನಿರ್ಮಾಣ ಮತ್ತು ಚರಂಡಿ ನಿರ್ಮಾಣ ಕಾಮಗಾರಿಯನ್ನು ವೀಕ್ಷಣೆ ಮಾಡಿದರು.
ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವತಿಯಿಂದ ಸ್ಟೋನ್‍ಹಿಲ್‍ನಲ್ಲಿ ನಿರ್ಮಾಣವಾಗುತ್ತಿರುವ 25 ಲಕ್ಷ ಲೀಟರ್ ಟ್ಯಾಂಕ್ ನಿರ್ಮಾಣ ಕಾಮಗಾರಿಯನ್ನು ವೀಕ್ಷಿಸಿ ನಂತರ ನಗರಸಭಾ ವ್ಯಾಪ್ತಿಯ ಇಂದಿರಾ ನಗರ ಲಿಂಗಪ್ಪನವರ ಮನೆಗೆ ಹೋಗುವ ರಸ್ತೆಯಲ್ಲಿ ತಡೆಗೋಡೆ ನಿರ್ಮಾಣ ಕಾಮಗಾರಿಗೆ ನಡೆಯಲಿರುವ ಸಿದ್ಧತೆ ಕುರಿತು ಪರಿಶೀಲಿಸಿದರು. ಬಳಿಕ ನಗರಸಭಾ ವ್ಯಾಪ್ತಿಯ ಮುತ್ತಣ್ಣ ಸರ್ಕಲ್ ಕಾಂಕ್ರೀಟಿಕರಣ ನಿರ್ಮಾಣ ಕಾಮಗಾರಿಯನ್ನು ಪರಿಶೀಲಿಸಿದರು.
ನಗರಾಭಿವೃದ್ಧಿ ಯೋಜನಾ ಕೋಶದ ಇಇ ಶಿವಾನಂದ, ನಗರಸಭೆಯ ಎಇಇ ರಾಜೇಂದ್ರ ಕುಮಾರ್, ಸಮಂತ್ ಕುಮಾರ್, ನಗರ ನೀರು ಸರಬರಾಜು ಒಳಚರಂಡಿ ಮಂಡಳಿಯ ಎಇಇ ಅಜಯ್, ಎಇ ಬಿಪಿನ್ ಅವರು ತಮ್ಮ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ಕಾಮಗಾರಿಗಳ ಪ್ರಗತಿ ಬಗ್ಗೆ ಮಾಹಿತಿ ನೀಡಿದರು.
No comments
Post a Comment