ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

No comments

ಮಡಿಕೇರಿ ಆ.24(web@timesofcoorg):-ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ವಿಕಲಚೇತನರಿಗೆ ನೀಡಲಾಗುತ್ತಿರುವ ವಿದ್ಯಾರ್ಥಿ ವೇತನ ಯೋಜನೆಯನ್ನು 2021-22 ನೇ ಸಾಲಿನಿಂದ ಸ್ಟೇಟ್ ಸ್ಕಾಲರ್‍ಶಿಪ್ ಪೋರ್ಟಲ್ https://ssp.postmatric.karnataka.gov.in/2021  ರಲ್ಲಿ 2021 ರ ಅಕ್ಟೋಬರ್, 31 ರೊಳಗೆ ಅರ್ಜಿ ಸಲ್ಲಿಸಬೇಕಿದೆ.  

ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿನ ಎಸ್‍ಎಸ್‍ಎಲ್‍ಸಿ ನಂತರದ (Post metric ವಿಕಲಚೇತನ ವಿದ್ಯಾರ್ಥಿಗಳು ಈ ಪೋರ್ಟಲ್‍ನಲ್ಲಿ ಅರ್ಜಿ ಸಲ್ಲಿಸಿ ಇಲಾಖಾ ಯೋಜನೆಯ ಸೌಲಭ್ಯ ಪಡೆದುಕೊಳ್ಳ¨.ಹುದು. ಹೆಚ್ಚಿನ ಮಾಹಿತಿಗೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಅವರ ಕಚೇರಿ ದೂ.ಸಂ. 08272-295829 ನ್ನು ಅಥವಾ ಆಯಾಯ ತಾಲ್ಲೂಕಿನ ತಾಲ್ಲೂಕು ಪಂಚಾಯಿತಿಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರನ್ನು ಸಂಪರ್ಕಿಸುವಂತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಅವರು ತಿಳಿಸಿದ್ದಾರೆ.

No comments

Post a Comment