ಕೊಡಗು ಜಿಲ್ಲೆಯ ಪ್ರವಾಸಿ ಸ್ಥಳಗಳಿಗೆ ಭೇಟಿ ನೀಡುವವರಿಗೆ RT-PCR ನೆಗೆಟಿವ್ ರಿಪೋರ್ಟ್ ಕಡ್ಡಾಯ : ಜಿಲ್ಲಾಡಳಿತ

No comments

 


ಮಡಿಕೇರಿ (Times Of Coorg) : ಕೇರಳ ಮತ್ತು ಮಹಾರಾಷ್ಟ್ರ ರಾಜ್ಯಗಳಲ್ಲಿ ಕೋವಿಡ್-19 ಸೋಂಕು ಹೆಚ್ಚುತ್ತಿದ್ದು, ಈ ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ಹರಡದಂತೆ ಮುನ್ನಚ್ಚರಿಕೆ ಕ್ರಮವಾಗಿ ಈ ಕೆಲಕಂಡ ವಿಶೇಷ ಸರ್ವೇಕ್ಷಣಾ ಮಾನದಂಡಗಳನ್ನು ಕೊಡಗು ಜಿಲ್ಲೆಯಾದ್ಯಂತ ದಿನಾಂಕ 05.08.2021ರಿಂದ ದಿನಾಂಕ 16.08.2021ರ ಬೆಳಗ್ಗೆ 6:00 ಗಂಟೆಯ ವರೆಗೆ ಜಾರಿಯಲ್ಲಿರುವಂತೆ ಆದೇಶಿಸಲಾಗಿದೆ. ಕೋವಿಡ್-19 ನಿಯಂತ್ರಿಸುವ ಸಂಬಂಧ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹೊರಡಿಸಿರುವ ಎಲ್ಲಾ ಮಾರ್ಗಸೂಚಿಗಳು ಮುಂಜಾಗ್ರತಾ ಕ್ರಮಗಳಾದ ಮಾಸ್ಕ್ ಧರಿಸುವಿಕೆ, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಮತ್ತು ಸ್ಯಾನಿಟೈಸರ್ ಬಳಕೆಯನ್ನು ಕಡ್ಡಾಯಗೊಳಿಸಿದೆ.. ಅಂತರ್ ರಾಜ್ಯಗಳಿಂದ ಕೊಡಗು ಜಿಲ್ಲೆಗೆ ಬಸ್ ಅಥವಾ ವೈಯುಕ್ತಿಕ ಸಾರಿಗೆ ಮೂಲಕ ಪ್ರವೇಶ ಪಡೆಯುವವರಿಗೆ ಕೋವಿಡ್ 2ನೇ ಡೋಸ್ ಲಸಿಕೆಯನ್ನು ಪಡೆದಿದ್ದರೂ, ಸಹ 72 ಗಂಟೆಗಳ ಒಳಗೆ ಮಾಡಿಸಿದ RT-PCR  ಪರೀಕ್ಷಾ ನೆಗೆಟಿವ್ ಪ್ರಮಾಣ ಪತ್ರವನ್ನು ಹೊಂದಿರುವುದನ್ನು  ಕಡ್ಡಾಯಗೊಳಿಸಲಾಗಿದೆ. .ಜಿಲ್ಲಾ ವ್ಯಾಪ್ತಿಯಲ್ಲಿನ ಎಲ್ಲಾ ಹೋಟೆಲ್, ಲಾಡ್ಜ್, ರೆಸಾರ್ಟ್, ಹೋಂ ಸ್ಟೇ, ಅರಣ್ಯ ಇಲಾಖೆಗಳ ವಸತಿ ಗೃಹ ಇತ್ಯಾದಿಗಳಲ್ಲಿ ತಂಗಲಿರುವವರು ಬುಕಿಂಗ್ ಸಮಯದಲ್ಲಿ ಸದರಿ ಪ್ರವಾಸಿಗಳು ಚೆಕ್ಇನ್  ದಿನದಿಂದ ಹಿಂದಿನ 72 ಗಂಟೆಗಳೊಳಗಾಗಿ ಮಾಡಿಸಿದ RT-PCR ನೆಗೆಟಿವ್ ಪರೀಕ್ಷಾ ಪ್ರಮಾಣ ಪತ್ರವನ್ನು ಹಾಜರುಪಡಿಸುವುದನ್ನು ಕಡ್ಡಾಯಗೊಳಿಸಲಾಗಿದೆ.ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳು ಹಾಗೂ ಇನ್ನಿತರ ಪ್ರೇಕ್ಷಣೀಯ ಸ್ಥಳಗಳಾದ ರಾಜಾಸೀಟ್, ಅಬ್ಬಿಫಾಲ್ಸ್, ಮಂದಾಲ್ಪಟ್ಟಿ, ದುಬಾರೆ, ನಿಸರ್ಗಧಾಮ, ಹಾರಂಗಿ ಡ್ಯಾಂ, ಚಿಕ್ಲಿಹೊಳೆ ಡ್ಯಾಂ, ಮಲ್ಲಳ್ಳಿ ಫಾಲ್ಸ್, ಇರ್ಪುಫಾಲ್ಸ್, ಚೇಲಾವರ ಫಾಲ್ಸ್ ಇತ್ಯಾದಿಗಳು ಮತ್ತು ಪ್ರವಾಸೋದ್ಯಮ, ಅರಣ್ಯ ಇಲಾಖೆ, ಪ್ರಾಚ್ಯ ವಸ್ತು / ಪುರಾತತ್ವ ಇಲಾಖೆಗಳ ಪ್ರವಾಸಿ ತಾಣಗಳು ಮತ್ತು ಇನ್ನಿತರೆ ಪ್ರೇಕ್ಷಣೀಯ ಸ್ಥಳಗಳಿಗೆ ಆಗಮಿಸುವ ಪ್ರವಾಸಿಗಳು ಹಾಗೂ ಸಾರ್ವಜನಿಕರಿಗೆ ಹಿಂದಿನ 72 ಗಂಟೆಗಳೊಳಗಾಗಿ ಮಾಡಿಸಿದ RT-PCR  ನೆಗೆಟಿವ್ ಪರೀಕ್ಷಾ ಪ್ರಮಾಣ ಪತ್ರವನ್ನು ಕಡ್ಡಾಯಗೊಳಿಸಲಾಗಿದೆ. ಈ ಬಗ್ಗೆ ಸಂಬಂಧಪಟ್ಟ ಇಲಾಖೆಗಳು ಸೂಕ್ತ ಕ್ರಮ ಕೈಗೊಳ್ಳುವುದು.ಕೋವಿಡ್-19 ನಿರ್ವಹಣೆಯ ಮುಂಜಾಗ್ರತಾ ಕ್ರಮಗಳನ್ನು ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮತ್ತು ಈ ಕಛೇರಿಯಿಂದ ನೀಡುವ ಎಲ್ಲಾ ನಿರ್ದೇಶನಗಳನ್ನು ಉಲ್ಲಂಘಿಸುವ ಯಾವುದೇ  ವ್ಯಕ್ತಿಯನ್ನು ವಿಪತ್ತು ನಿರ್ವಹಣಾ ಕಾಯ್ದೆ ಕಲಂ 51 ರಿಂದ 60ರ ಉಪಬಂಧಗಳು ಮತ್ತು ಭಾರತೀಯ ದಂಡಸಂಹಿತೆ ಕಲಂ 188 ಹಾಗೂ ದಿ ಕರ್ನಾಟಕ ಎಪಿಡೆಮಿಕ್ ಡಿಸೀಸಸ್ ಆಕ್ಟ್-2020ರ ಕಲಂ 9ರ ಅಡಿಯಲ್ಲಿನ ಕಾನೂನು ಕ್ರಮಗಳು ಮತ್ತು ಕಾಲಕಾಲಕ್ಕೆ ಅನ್ವಯವಾಗಬಹುದಾದ ಇತರೆ ಕಾನೂನು ಉಪಬಂಧಗಳ ಮೇರೆಗೆ ದಂಡನೆಗೆ ಒಳಗಾಗುವರು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಕೊಡಗು ಜಿಲ್ಲೆ ಪಕ್ರಟಣೆಯಲ್ಲಿ ತಿಳಿಸಿದ್ದಾರೆ.

No comments

Post a Comment