ಕೊಡಗು ಜಿಲ್ಲೆಯಲ್ಲಿ ಶೇ 82% ಲಸಿಕೆಯ ಗುರಿ ಸಾಧಿಸಲಾಗಿದೆ -ಜಿಲ್ಲಾಧಿಕಾರಿ ಚಾರುಲತಾ ಸೋಮಲ್

No comments

ವರದಿ :ಝಕರಿಯ ನಾಪೋಕ್ಲು

ನಾಪೋಕ್ಲು (web@timesofcoorg) : ಕೊಡಗು ಜಿಲ್ಲೆಯಲ್ಲಿ ಕೊರೋನಾ ರೋಗವನ್ನು ನಿಯಂತ್ರಿಸಲು ಜಿಲ್ಲೆಯ ಶೇ 82%ರಷ್ಟು ಜನರಿಗೆ ಕೋವಿಡ್ ಲಸಿಕೆಯನ್ನು  ನೀಡಲಾಗಿದ್ದು ಮುಂದಿನ ದಿನಗಳಲ್ಲಿ ಶೇ 100%ರಷ್ಟು ಲಸಿಕೆಯನ್ನು ನೀಡುವ ಗುರಿಯನ್ನು ಸಾಧಿಸಲಾಗುವುದು ಎಂದು ಕೊಡಗು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಹೇಳಿದರು.


 ನಾಪೋಕ್ಲು ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ಕೋವಿಡ್ ನಿಯಂತ್ರಣದ ಬಗ್ಗೆ ಅಧಿಕಾರಿಗಳಿಂದ ಮಾಹಿತಿಯನ್ನು ಪಡೆದು ಮಾತನಾಡಿದ ಅವರು ಕೊಡಗು ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರ ಈಗ 2% ಜಾಸ್ತಿ ಇರುವುದರಿಂದ ಇದನ್ನು ನಿಯಂತ್ರಿಸಲು ಅಧಿಕಾರಿಗಳು ಹೆಚ್ಚಿನ ಶ್ರಮಪಡುತ್ತಿದ್ದಾರೆ ಇದರಿಂದ ಪಾಸಿಟಿವಿಟಿ ಕಡಿಮೆಯಾಗಿದೆ ಎಂದರು.

:ಕೊಡಗು ಜಿಲ್ಲೆಯ ಗಡಿ ಬಾಗಗಳಲ್ಲಿ ಕಟ್ಟುನಿಟ್ಟಿನ ಕ್ರಮಕ್ಕೆ  ಡಿ ಸಿ  ಸೂಚನೆ 

ಕೇರಳ ರಾಜ್ಯದಲ್ಲಿ ಕಂಡು ಬಂದಂತಹ ನಿಫಾ ವೈರಸ್ ನಮ್ಮ ಕೊಡಗು ಜಿಲ್ಲೆಯಲ್ಲಿ ಯಾವುದೇ ಲಕ್ಷಣಗಳು ಕಂಡುಬಂದಿಲ್ಲ ಆದರೂ ರಾಜ್ಯ ಸರ್ಕಾರದ ಆದೇಶದಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳು ಇದರ ಬಗ್ಗೆ ಜಿಲ್ಲೆಯ ಗಡಿಭಾಗಗಳಲ್ಲಿ ಹೆಚ್ಚಿನ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದ ಅವರು ಯಾರು ಅನಾವಶ್ಯಕವಾಗಿ ಕೇರಳ ರಾಜ್ಯಕ್ಕೆ ಹೋಗುವುದು ಬರುವುದು ಮಾಡಬಾರದು ಅಂಥವರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಎಚ್ಚರಿಸಿದರು.

 ನಂತರ ನಾಪೋಕ್ಲುವಿನ ನಾಡ ಕಚೇರಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ಕಂದಾಯ ಇಲಾಖೆಯ ಕಾರ್ಯವೈಖರಿಯನ್ನು ಪರಿಶೀಲಿಸಿದರು.

 ಈ ಸಂದರ್ಭದಲ್ಲಿ ಸಾರ್ವಜನಿಕ ರಾದ ಕುಲ್ಲೇಟಿರ ಅಜಿತ್ ನಾಣಯ್ಯ ,ಕೇಟೋಳಿರ ಹರೀಶ್ ಪೂವಯ್ಯ, ಗ್ರಾಮ ಪಂಚಾಯತ್ ಸದಸ್ಯ ಕುಶು ಕುಶಾಲಪ್ಪ ನವರು ಸ್ಥಳೀಯ ಕಾಲೇಜು ಜಾಗದ ಒತ್ತುವರಿಯ ಬಗ್ಗೆ ಈ ಹಿಂದೆ ಇಲಾಖೆಗೆ ಮನವಿಯನ್ನು ನೀಡಿದರೂ ಯಾವುದೇ ಕ್ರಮ ಕೈಗೊಂಡಿಲ್ಲ ಆದ್ದರಿಂದ ಜಿಲ್ಲಾಧಿಕಾರಿಗಳು ಕೂಡಲೇ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರ ಪರವಾಗಿ ಮನವಿ ಸಲ್ಲಿಸಿದರು. ಮನವಿಯನ್ನು ಸ್ವೀಕರಿಸಿದ ಜಿಲ್ಲಾಧಿಕಾರಿ ಇದನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

 ನಂತರದಲ್ಲಿ ನಾಪೋಕ್ಲುವಿನ ಹಳೇತಾಲ್ಲೂಕು ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಸಾರ್ವಜನಿಕರಿಗೆ ಕೋವಿಡ್ ಲಸಿಕೆ ನೀಡುತ್ತಿದ್ದ ಲಸಿಕಾ ಕೇಂದ್ರಕ್ಕೆ ಭೇಟಿ ನೀಡಿ ಮಾಹಿತಿಯನ್ನು ಪಡೆದರು.


 ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳೊಂದಿಗೆ ಮಡಿಕೇರಿ ತಾಲೂಕು ತಹಶೀಲ್ದಾರ್ ಮಹೇಶ್, ನಾಪೋಕ್ಲು ಕಂದಾಯ ಪರಿವೀಕ್ಷಕ ರವಿಕುಮಾರ್,ತಾಲ್ಲೂಕು ವ್ಯಧ್ಯಾಧಿಕಾರಿ ಡಾ ಚೇತನ್, ನಾಪೋಕ್ಲು ಸಮುದಾಯ ಆರೋಗ್ಯ ಕೇಂದ್ರದ ವೈದ್ಯರಾದ ಡಾ, ಚಂಗುಲಂಡ ಪೂವಯ್ಯ, ಡಾ. ಆಕಾಶ್ , ಗ್ರಾಮಲೆಕ್ಕಿಗೆ ಅಮೃತ, ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಮತ್ತಿತರರು ಇದ್ದರು.

No comments

Post a Comment