ವಿರಾಜಪೇಟೆ ಮತ್ತು ಸೋಮವಾರಪೇಟೆ ಪಟ್ಟಣ ಪಂಚಾಯತ್ ವಾರ್ಡ್ ಚುನಾವಣೆ : ಮದ್ಯ ಮಾರಾಟ ನಿಷೇಧ

No comments

ಮಡಿಕೇರಿ (web@timesofcoorg):-ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ 2021 ನ್ನು ಸುಸೂತ್ರವಾಗಿ ನಡೆಸಲು ಹಾಗೂ ಶಾಂತಿಯುತ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಕರ್ನಾಟಕ ಅಬಕಾರಿ (ಸನ್ನದುಗಳ ಸಾಮಾನ್ಯ ಷರತ್ತುಗಳು) ನಿಯಮಗಳು 1967ರ ನಿಯಮ 10 ಬಿ ಮತ್ತು ಅಬಕಾರಿ ಕಾಯ್ದೆ 1965ರ ಕಲಂ 21 ರ ಅಡಿಯಲ್ಲಿ ಪ್ರತ್ಯಾಯೋಜಿತವಾಗಿರುವ ಅಧಿಕಾರದಂತೆ ನೀತಿಸಂಹಿತೆ ಜಾರಿಯಲ್ಲಿರುವ ವಿರಾಜಪೇಟೆ ಮತ್ತು ಸೋಮವಾರಪೇಟೆ ಪಟ್ಟಣ ಪಂಚಾಯತ್‍ಗಳ, ವಾರ್ಡ್‍ಗಳ 3 ಕಿ.ಮೀ. ವ್ಯಾಪ್ತಿಯಲ್ಲಿ ಸೆಪ್ಟೆಂಬರ್, 2 ರ ಬೆಳಗ್ಗೆ 7 ಗಂಟೆಯಿಂದ ಸೆಪ್ಟೆಂಬರ್, 03 ರ ಮಧ್ಯರಾತ್ರಿ 12 ಗಂಟೆಯವರೆಗೆ ಎಲ್ಲಾ ವಿಧದ ಮದ್ಯಗಳ ತಯಾರಿಕೆ, ಸಾಗಾಣಿಕೆ, ಶೇಖರಣೆ ಮತ್ತು ಎಲ್ಲಾ ರೀತಿಯ ಅಂಗಡಿ, ಬಾರ್ ಮತ್ತು ರೆಸ್ಟೋರೆಂಟ್, ಕ್ಲಬ್, ಹೋಟೆಲ್ ಮುಂತಾದವುಗಳಲ್ಲಿ ಎಲ್ಲಾ ವಿಧದ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಚಾರುಲತಾ ಸೋಮಲ್ ಅವರು ಆದೇಶಿಸಿದ್ದಾರೆ. 

      ಚುನಾವಣೆ ನಡೆಯಲಿರುವ ವಾರ್ಡ್ ವಿವರ: ವಿರಾಜಪೇಟೆ ಪಟ್ಟಣ ಪಂಚಾಯತ್‍ನ 13ನೇ ವಾರ್ಡ್, ಸೋಮವಾರಪೇಟೆ ಪಟ್ಟಣ ಪಂಚಾಯತ್‍ನ 01 ಮತ್ತು 3ನೇ ವಾರ್ಡ್‍ಗಳಲ್ಲಿ ಚುನಾವಣೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಚಾರುಲತಾ ಸೋಮಲ್ ಅವರು ತಿಳಿಸಿದ್ದಾರೆ.

No comments

Post a Comment