ಕೊಡಗು ಜಿಲ್ಲೆಯಲ್ಲಿ ಜಲಕ್ರೀಡೆಗೆ ಅನುಮತಿ : ಜಿಲ್ಲಾಧಿಕಾರಿ ಚಾರುಲತಾ ಸೋಮಲ್

No comments

ಮಡಿಕೇರಿ (web@timesofcoorg):-ನೆರೆಯ ಕೇರಳ ರಾಜ್ಯದಲ್ಲಿ ಕೋವಿಡ್-19 ಸೋಂಕಿನ ಪ್ರಮಾಣ ಹೆಚ್ಚುತ್ತಿದ್ದು, ಸರ್ಕಾರದ ಇತ್ತೀಚಿನ ಆದೇಶಗಳನ್ನು ಆಧರಿಸಿ, ಕೊಡಗು ಜಿಲ್ಲೆಯ ಕೋವಿಡ್ ಪರಿಸ್ಥಿತಿಯನ್ನು ಗಮನದಲ್ಲಿರಿಸಿಕೊಂಡು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಆದೇಶ ಹೊರಡಿಸಿದ್ದಾರೆ.

ಸರ್ಕಾರದ ಆದೇಶದಂತೆ ಹಾಲಿ ಜಾರಿಯಲ್ಲಿರುವ ಲಾಕ್‍ಡೌನ್ ನಿಯಮಾವಳಿಗಳಿಗೆ ಭಾಗಶಃ ಮಾರ್ಪಡು ಮಾಡಿ ಆದೇಶ ಹೊರಡಿಸಲಾಗಿದೆ. ‘ಎಲ್ಲಾ ರೀತಿಯ ಜಲಕ್ರೀಡೆ ಮತ್ತು ಸಂಬಂಧಿತ ಚಟುವಟಿಕೆಗಳನ್ನು ನದಿಗಳಲ್ಲಿ, ನೈಸರ್ಗಿಕ ತೊರೆಗಳಲ್ಲಿ ಮತ್ತು ಕೆರೆಗಳಲ್ಲಿ ನಡೆಸಲು ಅನುಮತಿಸಿದೆ. 

ಆದರೆ ಅಮ್ಯೂಸ್‍ಮೆಂಟ್ ಪಾರ್ಕ್‍ಗಳಲ್ಲಿ ಹಾಗೂ ಸ್ವಿಮ್ಮಿಂಗ್ ಪೂಲ್‍ಗಳಲ್ಲಿ ಜಲಕ್ರೀಡೆ ಮತ್ತು ಅದಕ್ಕೆ ಸಂಬಂಧಿತ ಸಾಹಸ ಚಟುವಟಿಕೆಗಳಿಗೆ ಅವಕಾಶ ಇರುವುದಿಲ್ಲ. ಸರ್ಕಾರದ ಆದೇಶದಂತೆ ಇವುಗಳಲ್ಲಿ ಕೇವಲ ಸ್ಪರ್ಧಾತ್ಮಕ ತರಬೇತಿ ಉದ್ದೇಶಕ್ಕೆ ಮಾತ್ರ ಅವಕಾಶ ಇರುತ್ತದೆ. ಈ ಸೇರ್ಪಡೆಯನ್ನು ಹೊರತುಪಡಿಸಿ ಉಳಿದಂತೆ ಆದೇಶದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.’ 

ಈ ಆದೇಶದ ದುರುಪಯೋಗ ಅಥವಾ ಉಲ್ಲಂಘನೆಯು ಭಾರತ ದಂಡ ಸಂಹಿತೆ ಕಲಂ 188, ದಿ ಕರ್ನಾಟಕ ಎಪಿಡೆಮಿಕ್ ಡಿಸೀಸಸ್ ಆಕ್ಟ್ಟ್ 2020, ಡಿಸಾಸ್ಟರ್ ಮ್ಯಾನೇಜ್‍ಮೆಂಟ್ ಆಕ್ಟ್ 2005ರಡಿ ಮತ್ತು ವಿವಿಧ ಕಾಯ್ದೆಗಳಡಿ ದಂಡನೀಯವಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಚಾರುಲತಾ ಸೋಮಲ್ ಅವರು ತಿಳಿಸಿದ್ದಾರೆ

No comments

Post a Comment