ಜೆಇಇ ಮತ್ತು ನೀಟ್ ಸ್ಪರ್ಧಾತ್ಮಕ ಪರೀಕ್ಷೆಗೆ ಅರ್ಜಿ ಆಹ್ವಾನ

No comments

ಮಡಿಕೇರಿ ಸೆ.23(web@timesofcoorg):-ಪ್ರಸಕ್ತ(2021-22) ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆಯ ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ಮೂಲಕ ಜೆಇಇ ಮತ್ತು ನೀಟ್  ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಆನ್‍ಲೈನ್ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ (2021-22) ಪ್ರಥಮ ಪಿಯುಸಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವ ಅಭ್ಯರ್ಥಿಗಳಿಗೆ ದ್ವಿತೀಯ ಪಿಯುಸಿ ಮುಕ್ತಾಯದವರೆಗೂ 24 ತಿಂಗಳು ಅಥವಾ 2023 ರ ಏಪ್ರಿಲ್ /ಮೇ ಮಾಹೆಯಲ್ಲಿ ನಡೆಯಲಿರುವ ಜೆಇಇ/ ನೀಟ್ ಪ್ರವೇಶ ಪರೀಕ್ಷೆಯವರೆಗೂ ಹಾಗೂ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವ ಅಭ್ಯರ್ಥಿಗಳಿಗೆ 10 ತಿಂಗಳು ಅಥವಾ 2022 ರ ಏಪ್ರಿಲ್/ ಮೇ ಮಾಹೆಯಲ್ಲಿ ನಡೆಯಲಿರುವ ಜೆ.ಇ.ಇ/ ನೀಟ್ ಪ್ರವೇಶ ಪರೀಕ್ಷೆಯವರೆಗೂ ಆನ್‍ಲೈನ್ ತರಬೇತಿ ಪಡೆಯಲು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಸಮಾಜ ಕಲ್ಯಾಣ ಇಲಾಖೆಯ ವೆಬ್‍ಸೈಟ್ www.sw.kar.nic.in  ನಲ್ಲಿ ಸೆಪ್ಟೆಂಬರ್ 30 ರ ಸಂಜೆ 5.30 ರೊಳಗೆ ಸಲ್ಲಿಸಲು ಅವಕಾಶವಿದೆ.

       ಹೆಚ್ಚಿನ ಮಾಹಿತಿಗೆ ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ ಕೊಡಗು ಜಿಲ್ಲೆ, ಮಡಿಕೇರಿ-08272-225531. ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಮಡಿಕೇರಿ-08272-223552. ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ ಸೋಮವಾರಪೇಟೆ-08276-281115 ಹಾಗೂ ಸಹಾಯಕ ನಿರ್ದೇಶಕರ ಕಚೇರಿ ಸಮಾಜ ಕಲ್ಯಾಣ ಇಲಾಖೆ ಪೊನ್ನಂಪೇಟೆ-08274-249476 ನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶೇಖರ್ ಅವರು ತಿಳಿಸಿದ್ದಾರೆ.

No comments

Post a Comment