ಮಡಿಕೇರಿ ರೋಟರಿ ಸಂಸ್ಥೆ ವತಿಯಿಂದ ಲಸಿಕೆ ಅಭಿಯಾನ

No comments

  ಮಡಿಕೇರಿ ಸೆ.23(web@timesofcoorg):-ಮಡಿಕೇರಿ ರೋಟರಿ ಸಂಸ್ಥೆ ವತಿಯಿಂದ ಜಿಲ್ಲಾ ಆರೋಗ್ಯ ಇಲಾಖೆ ಸಹಯೋಗದಲ್ಲಿ ಲಸಿಕೆ ನೀಡಿಕೆ ಅಭಿಯಾನಕ್ಕೆ ಚಾಲನೆ ನೀಡಲಾಯಿತು. 

      ಮಡಿಕೇರಿ ರೋಟರಿ ಸಭಾಂಗಣದಲ್ಲಿ ಆಯೋಜಿತ ಲಸಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ರೋಟರಿ ಉಪ ರಾಜ್ಯಪಾಲ ಅನಿಲ್ ಎಚ್.ಟಿ. ಅವರು ಲಸಿಕೆ ನೀಡಿಕೆಯಲ್ಲಿ ರಾಜ್ಯದಲ್ಲಿಯೇ ಕೊಡಗು ಉತ್ತಮ ಸಾಧನೆ ಮಾಡಿದೆ. ರೋಟರಿ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳೂ ಜಿಲ್ಲಾಡಳಿತ, ಆರೋಗ್ಯ ಇಲಾಖೆಗೆ ಸಹಕಾರ ನೀಡಿದೆ. ಹೀಗಾಗಿಯೇ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಿಕೆಯಲ್ಲಿ ಕೊಡಗು ಶೇ.92 ರಷ್ಟು ಸಾಧನೆಗೆ ಕಾರಣವಾಗಿದೆ. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿಗಳು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರ ಶ್ರಮ ಗಮನಾರ್ಹವಾದದ್ದು ಎಂದು ಶ್ಲಾಘಿಸಿದರು.

      ಜಿಲ್ಲಾ ಆರೋಗ್ಯ ಇಲಾಖೆಯ ಅಧಿಕಾರಿ ಡಾ.ಗೋಪಿನಾಥ್, ತಾಲೂಕು ವೈದ್ಯಾಧಿಕಾರಿ ಡಾ.ಮಂಜುನಾಥ್, ಮಡಿಕೇರಿ ರೋಟರಿ ಅಧ್ಯಕ್ಷ ನಡಿಕೇರಿಯಂಡ ಅಚ್ಚಯ್ಯ, ಕಾರ್ಯದರ್ಶಿ ಲಲಿತಾ ರಾಘವನ್, ರೋಟರಿ ಮಾಜಿ ರಾಜ್ಯಪಾಲ ಡಾ.ರವಿ ಅಪ್ಪಾಜಿ, ಜಿಲ್ಲಾ ನಿರ್ದೇಶಕ ರತನ್ ತಮ್ಮಯ್ಯ, ನಿರ್ದೇಶಕರಾದ ಅನಿಲ್ ಕೃμÁ್ಣನಿ, ಮಲ್ಲಿಗೆ ಪೈ ಹಾಜರಿದ್ದರು.

No comments

Post a Comment