ಮಡಿಕೇರಿ ಸೆ.20(web@timesofcoorg):-ಕೊಡಗು ಜಿಲ್ಲೆ ಸೋಮವಾರಪೇಟೆ ತಾಲ್ಲೂಕು ರಾಜ್ಯ ಹೆದ್ದಾರಿ-91 ಕೊಣನೂರು-ಮಾಕುಟ್ಟ ರಸ್ತೆಯ ಗುಡ್ಡೆಹೊಸೂರಿನಿಂದ ಕಬ್ಬಿನಗದ್ದೆವರೆಗಿನ ಸರಪಳಿ 27.40 ಕಿ.ಮೀ. ರಿಂದ 38.00 ಕಿ.ಮೀ. ರವರೆಗೆ ಆಯ್ದ ಭಾಗಗಳಲ್ಲಿ ಲೋಕೋಪಯೋಗಿ ಇಲಾಖೆ ವತಿಯಿಂದ ಪೇವರ್ ಮೂಲಕ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿಯನ್ನು ಕೈಗೊಳ್ಳುವ ನಿಟ್ಟಿನಲ್ಲಿ ಪ್ರಯಾಣಿಕರ ಮತ್ತು ಸಾರ್ವಜನಿಕರ ಸಂಚಾರದ ಹಿತದೃಷ್ಟಿಯಿಂದ ದಂಡ ಪ್ರಕ್ರಿಯಾ ಸಂಹಿತೆ 1973ರ ಸೆಕ್ಷನ್ 144 ಮತ್ತು ಮೋಟಾರು ವಾಹನ ಕಾಯ್ದೆ 1988ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನಗಳ ನಿಯಮ 1989ರ (ತಿದ್ದುಪಡಿ ನಿಯಮಾವಳಿ 1990) ನಿಯಮ 221ಎ(5)ರಲ್ಲಿ ದತ್ತವಾದ ಅಧಿಕಾರದಂತೆ ಗುಡ್ಡೆಹೊಸೂರಿನಿಂದ ಕಬ್ಬಿನಗದ್ದೆವರೆಗಿನ ರಸ್ತೆಯಲ್ಲಿ ಸೆಪ್ಟೆಂಬರ್, 22 ರಿಂದ ನವೆಂಬರ್, 02 ರವರೆಗೆ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ನಿರ್ಬಂಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಚಾರುಲತಾ ಸೋಮಲ್ ಅವರು ಆದೇಶಿಸಿದ್ದಾರೆ.
ಸಾರ್ವಜನಿಕರು ಬದಲಿ ರಸ್ತೆಯಾದ ಕುಶಾಲನಗರ-ಕೊಡಗರಹಳ್ಳಿ–ಕಂಬಿಬಾಣೆ–ಚಿಕ್ಲಿಹೊಳೆ–ರಂಗಸಮುದ್ರ ಮಾರ್ಗವಾಗಿ ಅಥವಾ ಕುಶಾಲನಗರ-ಸುಂಟಿಕೊಪ್ಪ–ಚೆಟ್ಟಳ್ಳಿ–ಒಂಟಿಯಂಗಡಿ ಮಾರ್ಗವನ್ನು ಬಳಸುವುದು. ಈ ಬಗ್ಗೆ ಮೋಟಾರ್ ವಾಹನ ಕಾಯ್ದೆ 1988ರ ಸೆಕ್ಷನ್ 116 ಹಾಗೂ ಕರ್ನಾಟಕ ಮೋಟಾರ್ ವಾಹನ ನಿಯಮ 1989ರ (ತಿದ್ದುಪಡಿ ನಿಯಮ 1990) ನಿಯಮ 221ಎ (2)ರಂತೆ ಅವಶ್ಯವಿರುವ ಸಂಜ್ಞೆ / ಸೂಚನಾ ಫಲಕವನ್ನು ಅಳವಡಿಸಲು ಜಿಲÁ್ಲ ಪೆÇಲೀಸ್ ಅಧೀಕ್ಷಕರು, ಕೊಡಗು ಜಿಲ್ಲೆ, ಮಡಿಕೇರಿ ಹಾಗೂ ಕಾರ್ಯಪಾಲಕ ಇಂಜಿನಿಯರ್, ಲೋಕೋಪಯೋಗಿ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ, ಕೊಡಗು ವಿಭಾಗ, ಮಡಿಕೇರಿ ಇವರಿಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಚಾರುಲತಾ ಸೋಮಲ್ ಅವರು ತಿಳಿಸಿದ್ದಾರೆ.
No comments
Post a Comment