ನಾಪೋಕ್ಲು (web@timesofcoorg) : :ಕರ್ನಾಟಕ ರಾಜ್ಯದಲ್ಲಿ ಮುಂಬರುವ ಎಲ್ಲಾ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವುದೇ ನಮ್ಮ ಯುವ ಕಾಂಗ್ರೆಸ್ ನ ಗುರಿಯಾಗಬೇಕು ಎಂದು ರಾಜ್ಯ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ ಹಾಗೂ ಕೊಡಗು ಕಾಂಗ್ರೆಸ್ ಉಸ್ತುವಾರಿ ವಿವೇಕ್ ಯಾವಗಲ್ ಹೇಳಿದರು.
ನಾಪೋಕ್ಲು ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ ಇಲ್ಲಿನ ಅಲ್ ಝೋಕ್ ಪಾರ್ಟಿ ಹಾಲ್ ನಲ್ಲಿ ಆಯೋಜಿಸಲಾಗಿದ್ದ ಕಾರ್ಯಕರ್ತರ ಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು.ಯುವ ಕಾಂಗ್ರೆಸ್ ನ ಕಾರ್ಯಕರ್ತರು ದೇಶ ಹಾಗೂ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಅಧಿಕಾರದ ಅವಧಿಯಲ್ಲಿ ಮಾಡಿದ ಜನಪರ ಕಾರ್ಯಕ್ರಮ ವನ್ನು ಪ್ರತಿ ಮನೆ ಮನೆಗಳಿಗೆ ತಲುಪಿಸುವಂತಹ ಕೆಲಸವನ್ನು ಮಾಡಬೇಕು. ಅಲ್ಲದೆ ಈಗಿನ ಸರ್ಕಾರದ ಪೆಟ್ರೋಲ್-ಡೀಸೆಲ್ ಮತ್ತು ಗ್ಯಾಸ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಹಾಗೂ ಭ್ರಷ್ಟಾಚಾರದ ಬಗ್ಗೆ ಪ್ರತಿಯೊಬ್ಬ ಮತದಾರನಿಗೂ ಮನದಟ್ಟು ಮಾಡುವಂತಹ ಕಾರ್ಯಕ್ರಮವನ್ನು ರೂಪಿಸಿ ಮುಂದೆ ರಾಜ್ಯದಲ್ಲಿ ನಡೆಯುವ ಎಲ್ಲಾ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷವು ಜಯಭೇರಿ ಬಾರಿಸಲು ಪ್ರತಿಯೊಬ್ಬ ಯುವ ಕಾಂಗ್ರೆಸ್ಸಿನ ಕಾರ್ಯಕರ್ತರು ಪ್ರಯತ್ನಿಸಬೇಕೆಂದು ಹೇಳಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾದ ಪ್ರದೇಶ ಯುವ ಕಾಂಗ್ರೆಸ್ ನ ಉಪಾಧ್ಯಕ್ಷರಾದ ಶ್ರೀಮತಿ ಭವ್ಯ, ಜಿಲ್ಲಾಧ್ಯಕ್ಷರಾದ ಮಿಥುನ್ ಗೌಡ, ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ಸಿನ ಪ್ರಧಾನ ಕಾರ್ಯದರ್ಶಿಗಳಾದ ರಿಯಾನ ರಾಜು, ಶಿರಿಲ್ ಪ್ರಭು,ಪ್ರಾಸ್ತಾವಿಕವಾಗಿ ಮಾತನಾಡಿದರು.
ಈ ಸಂದರ್ಭದಲ್ಲಿ ನಾಪೋಕ್ಲು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಮಹಮ್ಮದ್ ಖುರೇಶಿ,ಸದಸ್ಯಕುಲ್ಲೆಟಿರ ಅರುಣ್ ಬೇಬ, ಕಾಂಗ್ರೆಸ್ ನ ಹಿರಿಯರಾದ ಅರೆಯಡ ಸೋಮಪ್ಪ,ಯುವ ಕಾಂಗ್ರೆಸ್ ಕಾರ್ಯಕರ್ತ ಅರುಣ ಮತ್ತು ಉದ್ದಿಯಂಡ ಸುಭಾಷ್ ನಾಣಯ್ಯ ,ರವರನ್ನು ಕಾಂಗ್ರೆಸ್ ಪಕ್ಷದ ವತಿಯಿಂದ ಶಾಲು ಹೊದಿಸಿ ಸನ್ಮಾನಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಾಪೋಕ್ಲು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಪರವಂಡ ಸಿರಾಜ್ ವಹಿಸಿದ್ದರು. ವೇದಿಕೆಯಲ್ಲಿ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷರಾದ ಸುದೈ ನಾಣಯ್ಯ,ಅಯ್ಯಂಗೇರಿ ಪಂಚಾಯತ್ ಸದಸ್ಯ ಅಬ್ದುಲ್ ರಾಶಿದ್, ನಾಪೋಕ್ಲು ಪಂಚಾಯತ್ ಸದಸ್ಯ ಸಾಬಾ ತಿಮ್ಮಯ್ಯ,ಸೇರಿದಂತೆ ಬ್ಲಾಕ್ ಯುವ ಕಾಂಗ್ರೆಸ್ ನ ಕಾರ್ಯಕರ್ತರು ಇದ್ದರು.
No comments
Post a Comment