ಬಿಸಿಎಂ ಇಲಾಖೆಯಿಂದ ಸ್ವಚ್ಚತಾ ಅಭಿಯಾನ

No comments

ಮಡಿಕೇರಿ :-ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಇಲಾಖೆಯಿಂದ ಅರಸು ಭವನದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀ ಜಯಂತಿ ಪ್ರಯುಕ್ತ ಶ್ರಮದಾನ ನಡೆಯಿತು. 

ಬಿಸಿಎಂ ಇಲಾಖೆ ಅಧಿಕಾರಿ ಎನ್.ಮಂಜುನಾಥ, ಪತ್ರಾಂಕಿತ ವ್ಯವಸ್ಥಾಪಕರಾದ ಕವಿತಾ ಪಿ.ಪಿ., ಕಚೇರಿ ಮೇಲ್ವಿಚಾರಕರಾದ ಶಿವಶಂಕರ್, ಪ್ರಥಮ ದರ್ಜೆ ಸಹಾಯಕರಾದ ಕೆ.ಬಿ.ದಯಾನಂದ ಹಾಗೂ ಕಚೇರಿ ಸಿಬ್ಬಂದಿ ಸ್ವಚ್ಚತಾ ಅಭಿಯಾನದಲ್ಲಿ ಪಾಲ್ಗೊಂಡಿದ್ದರು. 

ಅದೇ ರೀತಿ ಇಲಾಖೆಯ ತಾಲ್ಲೂಕು ಮಟ್ಟದ ಕಚೇರಿಗಳು, ವಿದ್ಯಾರ್ಥಿ ನಿಲಯಗಳಲ್ಲಿ, ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳು, ನಿಲಯ ಮೇಲ್ವಿಚಾರಕರು, ಅಡುಗೆ ಸಿಬ್ಬಂದಿಗಳು, ಶಾಲೆಗಳ ಪ್ರಾಂಶುಪಾಲರು, ಬೋಧಕ/ ಬೋಧಕೇತರ ಸಿಬ್ಬಂದಿಗಳು, ನಿಲಯಪಾಲಕರು, ಎಲ್ಲಾ ವಿದ್ಯಾರ್ಥಿ ನಿಲಯಗಳ ಮತ್ತು ವಸತಿ ಶಾಲೆಯ ವಿದ್ಯಾರ್ಥಿಗಳು ಸಕ್ರಿಯವಾಗಿ ಶ್ರಮದಾನದಲ್ಲಿ ಭಾಗವಹಿಸಿ ಸ್ವಚ್ಛತೆ ಮತ್ತು ನೈರ್ಮಲ್ಯದ ಕುರಿತು ಅರಿವು ಕಾರ್ಯಕ್ರಮ ಜರುಗಿತು.

No comments

Post a Comment