ತಲಕಾವೇರಿ ಪವಿತ್ರ ತೀರ್ಥೋದ್ಬವ ಭಕ್ತಾಧಿಗಳಿಗೆ ಅವಕಾಶ: ಕೋಟ ಶ್ರೀನಿವಾಸ ಪೂಜಾರಿ

No comments

ಮಡಿಕೇರಿ ಅ.06 :-ನಾಡಿನ ಜೀವನದಿ ‘ಕಾವೇರಿ’ ಉಗಮ ಸ್ಥಾನ ತಲಕಾವೇರಿಯಲ್ಲಿ ಇದೇ ಅಕ್ಟೋಬರ್ 17 ರಂದು ಜರುಗುವ ಪವಿತ್ರ ತೀರ್ಥೋದ್ಬವಕ್ಕೆ ಭಕ್ತಾಧಿಗಳು ತೆರಳಲು ಅವಕಾಶ ಮಾಡಲಾಗಿದೆ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಅವರು ತಿಳಿಸಿದ್ದಾರೆ.   

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಪವಿತ್ರ ತೀರ್ಥೋದ್ಬವ ಸಂಬಂಧ ಸಚಿವರು ಮಾಹಿತಿ ನೀಡಿದರು. 

 ಕಾವೇರಿ ತುಲಾ ಸಂಕ್ರಮಣ ಜಾತ್ರಾ ದಿನದಂದು ಕೋವಿಡ್ 19 ನಿಂದಾಗಿ ಕೆಲವು ನಿರ್ಬಂಧಗಳನ್ನು ಹೇರಲಾಗಿತ್ತು, ಸದ್ಯ ಜಿಲ್ಲೆಯಲ್ಲಿ ಕೋವಿಡ್ 19 ಪ್ರಕರಣಗಳು ಕಡಿಮೆಯಾಗುತ್ತಿರುವ ಹಿನ್ನೆಲೆ ಭಕ್ತಾಧಿಗಳ ಭಾವನೆಗೆ ಸ್ಪಂದಿಸಿ ತಲಕಾವೇರಿಗೆ ತೆರಳಲು ಅವಕಾಶ ಮಾಡಲಾಗಿದೆ ಎಂದು ಸಚಿವರು ಹೇಳಿದರು. 

‘ಜಿಲ್ಲೆಯ ಜನತೆ ತಾಯಿ ಕಾವೇರಿ ಮಾತೆಯನ್ನು ಭಾವನಾತ್ಮಕ ಪೂಜಿಸುತ್ತಾರೆ. ಆ ದಿಸೆಯಲ್ಲಿ ಜನರ ಭಾವನೆಗೆ ಸ್ಪಂದಿಸಿ ನಿರ್ಬಂಧಗಳನ್ನು ಸಡಿಲಿಸಲಾಗಿದೆ, ಭಕ್ತಾಧಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಕೋವಿಡ್ 19 ನಿಯಮಗಳನ್ನು ಪಾಲಿಸಿ ಪವಿತ್ರ ತುಲಾ ಸಂಕ್ರಮಣ ತೀರ್ಥೋಧ್ಬವಕ್ಕೆ ತೆರಳಲು ಅವಕಾಶ ಕಲ್ಪಿಸಲಾಗಿದೆ ಎಂದರು.’

ಶಾಸಕಾರದ ಎಂ.ಪಿ.ಅಪ್ಪಚ್ಚು ರಂಜನ್ ಅವರು ಮಾತನಾಡಿ ಕಳೆದ ಸಭೆಯಲ್ಲಿ ಕೋವಿಡ್ ಹಿನ್ನಲೆ ಆರೋಗ್ಯದ ಹಿತದೃಷ್ಟಿಯಿಂದ ಕೆಲವು ನಿರ್ಬಂಧಗಳನ್ನು ವಿಧಿಸಲಾಗಿತ್ತು, ಆದರೆ ಕೋವಿಡ್ 19 ಪ್ರಕರಣಗಳು ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿರುವ ಹಿನ್ನಲೆ ಭಕ್ತಾದಿಗಳು ತಲಕಾವೇರಿಗೆ ತೆರಳಲು ಅವಕಾಶ ಮಾಡಲಾಗಿದೆ ಎಂದು ಸಚಿವರು ಹೇಳಿದರು. 

ಶಾಸಕಾರದ ಕೆ.ಜಿ.ಬೋಪಯ್ಯ, ವಿಧಾನ ಪರಿಷತ್ ಸದಸ್ಯರಾದ ಸುನೀಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ಪಶ್ಚಿಮ ಘಟ್ಟ ಕಾರ್ಯಪಡೆ ಸಮಿತಿಯ ಅಧ್ಯಕ್ಷರಾದ ರವಿಕುಶಾಲಪ್ಪ, ಮಡಿಕೇರಿ ನಗರಾಭಿವೃದ್ದಿ ಪ್ರಾಧಿಕಾರದ ಅದ್ಯಕ್ಷರಾದ ರಮೇಶ್ ಹೊಳ್ಳ, ಜಿಲ್ಲಾಧಿಕಾರಿ ಚಾರುಲತಾ ಸೋಮಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾಮಿಶ್ರಾ, ಜಿ.ಪಂ.ಸಿಇಒ ಭನ್ವರ್ ಸಿಂಗ್ ಮೀನಾ, ಉಪ ವಿಭಾಗಾಧಿಕಾರಿ ಈಶ್ವರ್ ಕುಮಾರ್ ಖಂಡೂ ಇತರರು ಇದ್ದರು.

No comments

Post a Comment