*ಕೊಡಗು ಜಿಲ್ಲೆಗೆ ಡಿಕೆಶಿ ಭೇಟಿ ನಂತರ ಹತಾಶಗೊಂಡ ಬಿಜೆಪಿ*. ಡಿಕೆಶಿ ವಿರುದ್ಧ ಅಪಪ್ರಚಾರಕ್ಕೆ ಖಂಡನೆ: ಸರಿತಾ ಪೂಣಚ್ಚ

No comments
ಮಡಿಕೇರಿ : ಇದುವರೆಗೂ ಜಿಲ್ಲೆಗೆ ಭೇಟಿ ನೀಡುವ ಯಾವುದೇ ನಾಯಕರುಗಳು ಹಾಗೂ ಜನಪ್ರತಿನಿಧಿಗಳನ್ನು ಸಂಪ್ರದಾಯದ ರೀತಿಯಲ್ಲಿ ಗೌರವಿಸುವುದು ಸಹಜವಾಗಿದ್ದರೂ ಉದ್ದೇಶಪೂರ್ವಕವಾಗಿ ಕೆಪಿಸಿಸಿ ರಾಜ್ಯಾಧ್ಯಕ್ಷ  ಡಿ.ಕೆ ಶಿವಕುಮಾರ್ ವಿರುದ್ಧ ಅಪಪ್ರಚಾರಕ್ಕೆ ಮುಂದಾಗಿರುವ ಬಿಜೆಪಿಯಿಂದ ಸಂಸ್ಕೃತ ಪಾಠ ಕಲಿಯಬೇಕಾಗಿಲ್ಲ ಎಂದು ಕೊಡಗು ಕಾಂಗ್ರೆಸ್ ವಕ್ತಾರೆ ಕೇಚಮಾಡ ಸರಿತಾ ಪೂಣಚ್ಚ ಆರೋಪಿಸಿದ್ದಾರೆ.
ಕಾಂಗ್ರೆಸ್ ಪಕ್ಷ ಬಲಪಡಿಸುವ ನಿಟ್ಟಿನಲ್ಲಿ ಹಾಗೂ ಮೇಕೆದಾಟು ಯೋಜನೆಗಾಗಿ ರಾಜ್ಯಾದ್ಯಂತ ಪಾದಯಾತ್ರೆ ಕೈಗೊಂಡಿರುವ ಡಿ.ಕೆ ಶಿವಕುಮಾರ್ ಅವರು ಕೊಡಗು ಜಿಲ್ಲೆಗೆ ಭೇಟಿ ನೀಡಿದ ಸಂದರ್ಭ ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡಿ ಗೌರವಪೂರ್ವಕವಾಗಿಯೇ ನಡೆದುಕೊಂಡಿದ್ದಾರೆಯೇ ಹೊರತು ಎಲ್ಲೂ ಅಗೌರವ ತೋರಿಲ್ಲ. ಡಿಕೆಶಿಯವರ ಕುಟುಂಬದ ಅಜ್ಜಿಯೊಬ್ಬರು ಇತ್ತೀಚೆಗೆ ಅಕಾಲಿಕವಾಗಿ ಮೃತಪಟ್ಟಿದ್ದು ಕುಟುಂಬದಲ್ಲಿ ಸೂತಕವಾಗಿರುವದರಿಂದ ಕ್ಷೇತ್ರಗಳಲ್ಲಿ ದೂರದಿಂದಲೇ ಭಕ್ತಿಪೂರ್ವಕವಾಗಿ ನಮಿಸಿದ್ದಾರೆ. ಇದನ್ನು ಸಹಿಸದ ಬಿಜೆಪಿಯ ಕೆಲವರು ಡಿಕೆಶಿ ವಿರುದ್ಧ ಅಪಪ್ರಚಾರ ಮಾಡಿರುವುದು ಖಂಡನೀಯ.ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಮತ್ತೆ ಒಗ್ಗಟ್ಟು ಪ್ರದರ್ಶನದ ಮೂಲಕ ಪಕ್ಷ ಕಟ್ಟುವ ಕೆಲಸವಾಗುತ್ತಿದೆ. ಇದರಿಂದ ಹತಾಶಗೊಂಡಿರುವ ಬಿಜೆಪಿ. ರಾಜ್ಯ ನಾಯಕರ ವಿರುದ್ಧ ಅಪಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಹೇಳಿದ ಅವರು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಕೆಲಸ ಈ ಹಿಂದೆ ಬಿಜೆಪಿ ಮಾಡಿದ್ದುಇವರಿಂದ ಕಾಂಗ್ರೆಸ್ ಪಾಠ ಕಲಿಯಬೇಕಾಗಿಲ್ಲ. ಜಿಲ್ಲೆಯಲ್ಲಿ ಕಳೆದ ಹಲವು ವರ್ಷಗಳಿಂದ ರಸ್ತೆ, ನೀರು, ವಿದ್ಯುತ್, ನಿವೇಶನ, ಕಾಡುಪ್ರಾಣಿಗಳ ಹಾವಳಿ ಸೇರಿದಂತೆ ರೈತರು, ಕಾರ್ಮಿಕರು ಸಾಮಾನ್ಯ ಜನರು ಸಂಕಷ್ಟದ ಬದುಕಿನಲ್ಲಿ ಜೀವನ ನಡೆಸುವಂತಾಗಿದೆ.ಜಿಲ್ಲೆಯ ಜ್ವಲಂತ ಸಮಸ್ಯೆಗಳಿಗೆ ಗಂಭೀರವಾಗಿ ಚಿಂತಿಸಬೇಕಾದ ಬಿಜೆಪಿ ಭ್ರಷ್ಟಾಚಾರದೊಂದಿಗೆ ಕೋಮು ಭಾವನೆಗಳನ್ನು ಕೆರಳಿಸುವ ಮೂಲಕ  ಜನಾಂಗಗಳ  ನಡುವೆ ಎತ್ತಿಕಟ್ಟುವ ಕೆಲಸ ಮಾಡುತ್ತಿದೆ. ಬಿಜೆಪಿಯ ದುರಾಡಳಿತದ ವಿರುದ್ಧ ಜಿಲ್ಲೆಯ ಜನತೆ ಆಕ್ರೋಶಗೊಂಡಿದ್ದು ಕಾಂಗ್ರೆಸ್ ನತ್ತ ಒಲವು ತೋರುತ್ತಿದ್ದಾರೆ. ಇನ್ನಾದರೂ ಕೀಳುಮಟ್ಟದ ರಾಜಕಾರಣ ಮಾಡುವದನ್ನ ಬಿಟ್ಟು ಗಂಭೀರ ಸಮಸ್ಯೆಗಳಿಗೆ ಸ್ಪಂದಿಸದಿದ್ದಲ್ಲಿ ಬಿಜೆಪಿಯ ವಿರುದ್ಧ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.        

No comments

Post a Comment