ಕಾಡಾನೆ ದಾಳಿ. ವಿದ್ಯಾರ್ಥಿ ಮನೆಗೆ ಎಸ್ ಡಿ ಪಿ ಐ ಪ್ರಮುಖರ ಬೇಟಿ. 25 ಲಕ್ಷ ಪರಿಹಾರ ನೀಡಲು ಒತ್ತಾಯ.ಪ್ರತಿಭಟನೆ ಎಚ್ಚರಿಕೆ .

No comments
ಸಿದ್ದಾಪುರ; ಕಾಡಾನೆ ದಾಳಿಗೆ ಬಲಿಯಾದ ನೆಲ್ಯಹುದಿಕೇರಿ ಸಮೀಪದ  ನಲ್ವತೇಕ್ರೆ ಗ್ರಾಮದ ವಿದ್ಯಾರ್ಥಿಯ ಕುಟುಂಬಕ್ಕೆ ಸರಕಾರ ರೂ 25 ಲಕ್ಷ ಪರಿಹಾರ ನೀಡುವಂತೆ ಎಸ್.ಡಿ.ಪಿ.ಐ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆ ಒತ್ತಾಯಿಸಿದರು.ಮೃತ ವಿದ್ಯಾರ್ಥಿ ಮೊಹಮ್ಮದ್ ಆಶಿಕ್ ಮನೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ ಕಳೆದ ಹಲವು ದಶಕಗಳಿಂದ ಜಿಲ್ಲೆಯಲ್ಲಿ ಕಾಡಾನೆ ಹಾವಳಿ ನಿರಂತರವಾಗಿದ್ದು.ಪ್ರತಿ ವರ್ಷ ಐವತ್ತಕ್ಕೂ ಹೆಚ್ಚು  ಮಾನವ ಹಾಗೂ ಜಾನುವಾರುಗಳು ಬಲಿಯಾಗುತ್ತಿದೆ. ಕೃಷಿಯನ್ನೇ ನಂಬಿ ಜೀವನ ನಡೆಸುತ್ತಿರುವ ರೈತರು ಕಾಡು ಪ್ರಾಣಿಗಳ ಹಾವಳಿಂದ ಭತ್ತ ಸೇರಿದಂತೆ ಅನೇಕ ಕೃಷಿ ಫಸಲುಗಳು ಬೆಳಸುವುದನ್ನೇ ಕೈ ಬಿಟ್ಟಿದ್ದಾರೆ.ಸಾಲ ಸೋಲ ಮಾಡಿ ಬೆಳೆದ ಫಸಲುಗಳು ಕಾಡಾನೆ ಪಾಲಾಗುತ್ತಿದ್ದು ಸಂಕಷ್ಟದ ನಡುವೆ  ರೈತರು ಕಂಗಾಲಾಗಿದ್ದಾರೆ.ಹೊಟ್ಟೆಪಾಡಿನ ಜೀವನಕ್ಕಾಗಿ ಕೂಲಿ ಕೆಲಸವನ್ನೇ ನಂಬಿ ಬದುಕುತ್ತಿರುವ ಕಾರ್ಮಿಕ ಕುಟುಂಬಗಳು  ಕಾಡು ಪ್ರಾಣಿಗಳ ಹಾವಳಿಗೆ  ನೆಮ್ಮದಿಯ ಜೀವನ ನಡೆಸಲು ಸಾಧ್ಯವಾಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ.ಗುಡ್ಡಗಾಡು ಪ್ರದೇಶವಾಗಿರುವ ಜಿಲ್ಲೆಯಲ್ಲಿ ಶಾಲಾ ಮಕ್ಕಳು, ಸಾರ್ವಜನಿಕರು ನೆಮ್ಮದಿಯಾಗಿ ನಡೆದಾಡಲು ಸಾಧ್ಯವಾಗದಂತಾಗಿದೆ.ನಿರಂತರ ಆನೆ ದಾಳಿಯಿಂದ ಸಾವು ನೋವುಗಳು ಸಂಭವಿಸುತ್ತಲೇ ಇದ್ದು ಕಳೆದ ವರ್ಷ ಹುಲಿ ದಾಳಿಗೆ ಮೂವರು ಬಲಿಯಾಗಿದ್ದಾರೆ.ಇಂತಹ ಗಂಭೀರ ಘಟನೆಗಳು ಸಂಭವಿಸುತ್ತಲೇ ಇದ್ದರೂ ಜನಪ್ರತಿನಿಧಿಗಳು ಮಾತ್ರ ಕಲಾಪಗಳಲ್ಲಿ ಚಕಾರವೆತ್ತದೆ.ಜಾತಿ ರಾಜಕಾರಣಗಳಿಗೆ ಸೀಮಿತವಾಗುತ್ತಿದ್ದಾರೆ. ಹಲವು ವರ್ಷಗಳಿಂದ ಗೆದ್ದು ಅಧಿಕಾರ ನಡೆಸಿರುವ ಜನಪ್ರತಿನಿಧಿಗಳ ನಿರ್ಲಕ್ಷ್ಯಯಿಂದ ಜಿಲ್ಲೆಯ ಜನರು ನೆಮ್ಮದಿಯ ಜೀವನ ನಡೆಸಲು ಸಾಧ್ಯವಾಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಕಾರ್ಮಿಕರು, ಬೆಳೆಗಾರರ ಸಮಸ್ಯೆಗಳಿಗೂ ಸ್ಪಂದಿಸದೆ . ಕಾಡು ಪ್ರಾಣಿಗಳ ಹಾವಳಿಯನ್ನು ಶಾಶ್ವತವಾಗಿ ತಡೆಗಟ್ಟಲು ಮುಂದಾಗದೆನಿರ್ಲಕ್ಷ್ಯ ತೋರುತ್ತಿರುವ ಹಿನ್ನೆಲೆಯಲ್ಲಿ   ಗಂಭೀರ ಸಮಸ್ಯೆಗಳು ಹೆಚ್ಚಾಗಲು ಕಾರಣವಾಗಿದೆ.ಜನಪ್ರತಿನಿಧಿಗಳು ಜಿಲ್ಲೆಯ ಅಭಿವೃದ್ಧಿ ಹಾಗೂ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ  ಶಾಶ್ವತ ಯೋಜನೆಗಳ ಬಗ್ಗೆ ಗಮನ ಹರಿಸಿ ಕಾಡು ಪ್ರಾಣಿಗಳ ಹಾವಳಿ ತಡೆಗಟ್ಟದಿದ್ದಲ್ಲಿ ಬೃಹತ್ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.ನಿಯೋಗದಲ್ಲಿ ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಶಫಿ,  ಮಡಿಕೇರಿ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಉಸ್ಮಾನ್, ಗ್ರಾಮ ಪಂಚಾಯತಿ ಸದಸ್ಯ ಸಂಶೀರ್, ಪ್ರಮುಖರಾದ ಅಶ್ರಫ್, ಶೌಕತ್, ಸಲೀಂ ಇದ್ದರು.

No comments

Post a Comment