ಫೆ.9 ರಂದು ಜಿಲ್ಲಾ ಯುವ ವಿಜ್ಞಾನಿ ಪ್ರಶಸ್ತಿಗೆ ಆಯ್ಕೆ

No comments

ಮಡಿಕೇರಿ ಫೆ.08:-ವಿದ್ಯಾರ್ಥಿಗಳಲ್ಲಿ ಎಳೆಯ ವಯಸ್ಸಿನಲ್ಲಿ ವೈಜ್ಞಾನಿಕ ವಿಧಾನದ ಮನವರಿಕೆ ಮಾಡುವ, ಭವಿಷ್ಯದ ವಿಜ್ಞಾನಿಗಳನ್ನಾಗಿ ರೂಪಿಸುವ ಹಾಗೂ ಮೂಲ ವಿಜ್ಞಾನ ವಿಷಯಗಳಲ್ಲಿ ಆಸಕ್ತಿ ಮತ್ತು ಚಿಂತನ ಕೌಶಲ್ಯವನ್ನು ವೃದ್ಧಿಸಬೇಕೆಂಬ ಉದ್ದೇಶದಿಂದ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ವತಿಯಿಂದ ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆ ಸಹಯೋಗದೊಂದಿಗೆ ಕಳೆದ ಹಲವು ವರ್ಷಗಳಿಂದ ಆಯೋಜಿಸಲಾಗುತ್ತಿರುವ ರಾಜ್ಯ ಮಟ್ಟದ ಯುವ ವಿಜ್ಞಾನಿ ಪ್ರಶಸ್ತಿ ಕಾರ್ಯಕ್ರಮವು ಫೆಬ್ರವರಿ 9 ರಂದು ರಾಜ್ಯಾದ್ಯಂತ ಏಕಕಾಲಕ್ಕೆ ನಡೆಯಲಿದೆ.

2021-22 ನೇ ಸಾಲಿಗೆ ನಡೆಯಲಿರುವ ಯುವ ವಿಜ್ಞಾನಿ ಸ್ಪರ್ಧೆಗೆ ಪೂರ್ವಭಾವಿಯಾಗಿ ಕೊಡಗು ಜಿಲ್ಲಾ ಮಟ್ಟದ ಯುವ ವಿಜ್ಞಾನಿ ಪ್ರಶಸ್ತಿ ಆಯ್ಕೆ ಪ್ರಕ್ರಿಯೆ ಸ್ಪರ್ಧಾ ಕಾರ್ಯಕ್ರಮವು ಫೆಬ್ರವರಿ 9 ರಂದು ಬೆಳಗ್ಗೆ 10 ಗಂಟೆಗೆ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಸಭಾಂಗಣದಲ್ಲಿ ನಡೆಯಲಿದೆ.
ಅಂದು ಬೆಳಗ್ಗೆ 10 ಗಂಟೆಗೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಿರುವ ಸ್ಪರ್ಧಿಗಳಿಗೆ ಲಿಖಿತ ಪರೀಕ್ಷೆ (40 ಅಂಕಗಳು) ನಡೆಯಲಿದ್ದು, ನಂತರ ಸ್ಪರ್ಧಿಗಳು ಸ್ವತಃ ರೂಪಿಸಿರುವ ವಿಜ್ಞಾನ ಯೋಜನೆ/ ಮಾದರಿ ಮಂಡನೆಗೆ (50 ಅಂಕಗಳು) ಅವಕಾಶ ಕಲ್ಪಿಸಿ, ನಂತರ ವಿದ್ಯಾರ್ಥಿಗಳಿಗೆ ಸಂದರ್ಶನ (10 ಅಂಕಗಳು) ನಡೆಸಿ ಆಯ್ಕೆ ಪ್ರಕ್ರಿಯೆ ನಡೆಸಲಾಗುವುದು. ಸ್ಪರ್ಧೆಗೆ ಪ್ರೌಢಶಾಲೆಯ 9 ರಿಂದ 12( ಪಿಯುಸಿ) ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಯುವ ವಿಜ್ಞಾನಿ ಪ್ರಶಸ್ತಿ ಸ್ಪರ್ಧೆ ಏರ್ಪಡಿಸಲಾಗಿದೆ ಎಂದು ಡಿಡಿಪಿಐ ವೇದಮೂರ್ತಿ ತಿಳಿಸಿದ್ದಾರೆ.

No comments

Post a Comment