ನಾಳೆಯಿಂದ ಮೂರು ದಿನ ಪ್ರೌಢ ಶಾಲೆ ಹಾಗು ಕಾಲೇಜುಗಳಿಗೆ ರಜೆ ಘೋಷಣೆ

No comments

 


ಪ್ರಚೋದನಕಾರಿ ಹೇಳಿಕೆ ನೀಡಬೇಡಿ - ಸಿಎಂ ವಾರ್ನಿಂಗ್

ಬೆಂಗಳೂರು TOC : ಹಿಜಾಬ್​ ವಿವಾದದಿಂದಾಗಿ ಹಲವೆಡೆ ಸಂಘರ್ಷ ಪರಿಸ್ಥಿತಿ ಉಂಟಾಗಿದ್ದು , ಈ ಸಂದಿಗ್ಧ ಪರಿಸ್ಥಿತಿಯನ್ನು ನಿಯಂತ್ರಿಸಲು ನಾಳೆಯಿಂದ ರಾಜ್ಯಾದ್ಯಂತ ಮೂರು ದಿನ ಎಲ್ಲ ಪ್ರೌಢ ಶಾಲಾ-ಕಾಲೇಜುಗಳಿಗೆ ಸರ್ಕಾರ ರಜೆ ಘೋಷಿಸಿದೆ.

ಈ ಕುರಿತು ಸಿಎಂ ಬಸವರಾಜ ಬೊಮ್ಮಾಯಿ ಟ್ವೀಟ್​ ಮಾಡಿದ್ದು, ನಾಳೆಯಿಂದ(ಫೆ.9) ಮೂರು ದಿನ ರಾಜ್ಯಾದ್ಯಂತ ಎಲ್ಲ ಪ್ರೌಢಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ವಿದ್ಯಾರ್ಥಿಗಳು, ಶಿಕ್ಷಕರು, ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಹಾಗೂ ರಾಜ್ಯದ ಸಮಸ್ತ ಜನತೆ ರಾಜ್ಯದಲ್ಲಿ ಶಾಂತಿ ಕಾಪಾಡಬೇಕು ಎಂದು ಸಿಎಂ ಮನವಿ ಮಾಡಿದ್ದಾರೆ.

ಹಲವು ಜಿಲ್ಲೆಗಳಲ್ಲಿ ಹಿಜಾಬ್​ ವಿವಾದ ಭುಗಿಲೆದ್ದಿದ್ದು, ಪರಿಸ್ಥಿತಿ ನಿಯಂತ್ರಿಸಲು ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ  ಪ್ರೌಢ ಶಾಲೆಗಳು, ಪಿಯು ಕಾಲೇಜುಗಳು, ಪದವಿ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥನಾರಾಯಣ್​ ತಿಳಿಸಿದ್ದಾರೆ

No comments

Post a Comment