ಕೊಡಗು ಜಿಲ್ಲೆಯಲ್ಲಿರುವ ಮೊರಾರ್ಜಿ ದೇಸಾಯಿ ಹಾಗೂ ಇತರೆ ವಸತಿ ಶಾಲೆಯ ಪ್ರವೇಶಕ್ಕೆ ಅರ್ಜಿ ಆಹ್ವಾನ

No comments

 


ಮಡಿಕೇರಿ ಫೆ.09 :-ಕೊಡಗು ಜಿಲ್ಲೆಯಲ್ಲಿರುವ ಮೊರಾರ್ಜಿ ದೇಸಾಯಿ, ಡಾ.ಬಿ.ಆರ್.ಅಂಬೇಡ್ಕರ್, ಏಕಲವ್ಯ, ಅಟಲ್ ಬಿಹಾರಿ ವಸತಿ ಶಾಲೆಗಳಲ್ಲಿ 6 ನೇ ತರಗತಿಗೆ (ಆಂಗ್ಲ ಮಾಧ್ಯಮ) 2022-23 ನೇ ಸಾಲಿಗೆ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಜಿಲ್ಲೆಯಲ್ಲಿರುವ 5 ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಫೆಬ್ರವರಿ, 22 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಮಾರ್ಚ್, 20 ರಂದು ಪರೀಕ್ಷೆ ನಡೆಸಲಾಗುತ್ತದೆ. ಆಸಕ್ತ ವಿದ್ಯಾರ್ಥಿಗಳು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ, ಡಾ.ಬಿ.ಆರ್.ಅಂಬೇಡ್ಕರ್, ಅಟಲ್ ಬಿಹಾರಿ, ಏಕಲವ್ಯ ವಸತಿ ಶಾಲೆಗಳಲ್ಲಿ ಆನ್ಲೈನ್ http://kea.kar.nic.inಮೂಲಕ ಅರ್ಜಿ ಸಲ್ಲಿಸಬಹುದು.

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ, ಡಾ.ಬಿ.ಆರ್.ಅಂಬೇಡ್ಕರ್, ಅಟಲ್ ಬಿಹಾರಿ, ಏಕಲವ್ಯ ವಸತಿ ಶಾಲೆಗಳಲ್ಲಿ ಉಚಿತ ಶಿಕ್ಷಣ, ಪಠ್ಯಪುಸ್ತಕ, ಸಮವಸ್ತ್ರ, ಶೂ, ಶುಚಿ ಸಾಮಾಗ್ರಿಗಳನ್ನು ನೀಡುವುದರ ಜೊತೆಗೆ ಉತ್ತಮ ಗುಣಮಟ್ಟದ ವಿದ್ಯಾಭ್ಯಾಸ ನೀಡಲಾಗುವುದು.

ಹೆಚ್ಚಿನ ಮಾಹಿತಿಗೆ ಡಾ.ಬಿ.ಆರ್.ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆ, ಸೋಮವಾರಪೇಟೆ 9611307646, ಮೊರಾರ್ಜಿ ದೇಸಾಯಿ ವಸತಿ ಶಾಲೆ, ಬಸವನಹಳ್ಳಿ 9945707234, ಏಕಲವ್ಯ ವಸತಿ ಶಾಲೆ, ಬಾಳುಗೋಡು 9902499269, ಅಟಲ್ ಬಿಹಾರಿ ವಸತಿ ಶಾಲೆ, ಭಾಗಮಂಡಲ 9148594914, ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆ, ನಾಪೋಕ್ಲು 9686597448, ಮೊರಾರ್ಜಿ ದೇಸಾಯಿ ವಸತಿ ಶಾಲೆ, ಕೂಡಿಗೆ 9741958012, ಮೊರಾರ್ಜಿ ದೇಸಾಯಿ ವಸತಿ ಶಾಲೆ ತಿತಿಮತಿ 9164040035, ಮೊರಾರ್ಜಿ ದೇಸಾಯಿ ವಸತಿ ಶಾಲೆ ಆಲೂರು ಸಿದ್ದಾಪುರ 9901267635, ಜಿಲ್ಲಾ ಸಮನ್ವಯಾಧಿಕಾರಿಗಳು 9611307646, ಉಪ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಮಡಿಕೇರಿ, ಕೊಡಗು ಜಿಲ್ಲೆ ಇವರನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಜಿಲ್ಲಾ ಸಮನ್ವಯಾಧಿಕಾರಿ ಅವರು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಇ-ಮೇಲ್ : keauthority-ka@nic.in ಸಹಾಯವಾಣಿ 080-23460460 ನ್ನು ಸಂಪರ್ಕಿಸಬಹುದು.

No comments

Post a Comment