ಇನಾಂ ಜಮೀನು ರೀ-ಗ್ರಾಂಟ್‍ಗಾಗಿ ಅರ್ಜಿ ಸಲ್ಲಿಸಲು ಕಾಲಾವಕಾಶ

No comments
ಮಡಿಕೇರಿ ಫೆ.08:-ಇನಾಂ ಜಮೀನು ರೀ-ಗ್ರಾಂಟ್ಗಾಗಿ ಅರ್ಜಿ ಸಲ್ಲಿಸಲು ಒಂದು ವರ್ಷ ಕಾಲಾವಕಾಶ ವಿಸ್ತರಿಸಿ ಸರ್ಕಾರ ಆದೇಶ ಹೊರಡಿಸಿದೆ. ಕರ್ನಾಟಕದ ಕೆಲವು ಇನಾಂಗಳ ರದ್ದಿಯಾತಿ ನಿಯಮ 1977 ಹಾಗೂ ಕರ್ನಾಟಕ(ಸಂಡೂರು ಪ್ರದೇಶ) ಇನಾಂಗಳ ರದ್ದಿಯಾತಿ ಅಧಿನಿಯಮ 1976 ಕ್ಕೆ ತಿದ್ದುಪಡಿ ತಂದು ಇನಾಂ ಜಮೀನು ರೀ-ಗ್ರಾಂಟ್ಗಾಗಿ ಅರ್ಜಿ ಸಲ್ಲಿಸಲು ಒಂದು ವರ್ಷ ಕಾಲಾವಧಿ ವಿಸ್ತರಿಸಿ ಸರ್ಕಾರ ಆದೇಶಿಸಿದೆ.
ಈ ಹಿನ್ನೆಲೆ ಗ್ರಾಮ, ಹೋಬಳಿ, ತಾಲ್ಲೂಕು ಮಟ್ಟದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಮಾಹಿತಿ ಒದಗಿಸಿ ಅರ್ಜಿ ಸ್ವೀಕರಿಸಲು ಅಗತ್ಯ ಕ್ರಮವಹಿಸುವಂತೆ ಕಂದಾಯ ಇಲಾಖೆ ಅಧಿಕಾರಿಗಳಿಗೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಎಚ್.ಎಂ.ಸುದರ್ಶನ್ ಅವರು ತಿಳಿಸಿದ್ದಾರೆ.

No comments

Post a Comment