ಪ್ರಧಾನಮಂತ್ರಿ ಉದ್ಯೋಗ ಸೃಜನ (ಪಿಎಂಇಜಿಪಿ) ಕಾರ್ಯಕ್ರಮದಡಿ ಕೈಗಾರಿಕೆ, ಸೇವಾ ಘಟಕಗಳಿಗೆ ಸಾಲ ಸೌಲಭ್ಯ ಅರ್ಜಿ ಆಹ್ವಾನ

No comments

ಮಡಿಕೇರಿ ಫೆ.08:-ಪ್ರಧಾನಮಂತ್ರಿ ಉದ್ಯೋಗ ಸೃಜನ (ಪಿಎಂಇಜಿಪಿ) ಕಾರ್ಯಕ್ರಮದಡಿ 2021-22 ನೇ ಸಾಲಿನಲ್ಲಿ ಕೈಗಾರಿಕೆ, ಸೇವಾ ಘಟಕಗಳಿಗೆ ಸಾಲ ಸೌಲಭ್ಯ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. 18 ವರ್ಷ ತುಂಬಿದ ಪಟ್ಟಣ/ ಗ್ರಾಮಾಂತರ ಪ್ರದೇಶದ ಅರ್ಹ ಅಭ್ಯರ್ಥಿಗಳು www.kvic.org.in (pmegp online application) ನಲ್ಲಿ ಅರ್ಜಿ ಸಲ್ಲಿಸಿ, ಅದರ ಪ್ರತಿಯನ್ನು 2 ಸೆಟ್ ದಾಖಲಾತಿಗಳೊಂದಿಗೆ ಕಚೇರಿಗೆ ಸಲ್ಲಿಸುವುದು. ಅಪೂರ್ಣವಾಗಿ ಭರ್ತಿ ಮಾಡಿದ ಹಾಗೂ ದಾಖಲೆಗಳನ್ನು ನೀಡದೆ ಇರುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗೆ ಕಚೇರಿ ದೂ.ಸಂ. 08272-228431/ 228746 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

No comments

Post a Comment