ಕೊಡಗು
ದಕ್ಷಿಣ ಕನ್ನಡ
ಮಂಗಳೂರು
ಮಂಗಳೂರು (Times Of Coorg@dakshina Kannada) : ಮಂಗಳೂರು ಸಮೀಪ ಬಂಗ್ಲೆಗಡ್ಡೆ ಎಂಬಲ್ಲಿ ಮನೆ ಮೇಲೆ ಗುಡ್ಡ ಕುಸಿದು ಇಬ್ಬರು ಮಕ್ಕಳು ಮಣ್ಣಿನಡಿ ಸಿಲುಕಿರುವ ಘಟನೆ ಇಂದು ಮಧ್ಯಾಹ್ನ ನಡೆದಿತ್ತು.
ಮಂಗಳೂರಿನ ಗುರುಪುರದಲ್ಲಿ ಎರಡು ದಿನಗಳಿಂದ ಸುರಿಯುತ್ತಿದ್ದ ಮಳೆಯಿಂದಾಗಿ ಗುಡ್ಡ ಕುಸಿತವಾಗಿತ್ತು. ಈ ವೇಳೆ ಮನೆಯಲ್ಲಿದ್ದ ಎಲ್ಲರೂ ಓಡಿ ಮನೆಯಿಂದ ಹೊರಗೆ ಬಂದರು ಇಬ್ಬರು ಮಕ್ಕಳು ಮಣ್ಣಿನಡಿಯಲ್ಲಿ ಸಿಲುಕಿಕೊಂಡಿದ್ದರು.
ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಸ್ಥಳೀಯರು ಎನ್ ಡಿಆರ್ ಎಫ್ ಸಿಬ್ಬಂದಿ, ಪೊಲೀಸರು, ಸ್ಥಳೀಯರು ಸತತ ನಾಲ್ಕು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಮೃತದೇಹಗಳನ್ನು ಹೊರತೆಗೆದಿದ್ದಾರೆ.
ಮಂಗಳೂರು ಬಂಗ್ಲಗುಡ್ಡೆಯಲ್ಲಿ ಗುಡ್ಡ ಕುಸಿತ : ಮಣ್ಣಿನಡಿ ಸಿಲುಕಿದ್ದ ಇಬ್ಬರು ಮಕ್ಕಳ ದುರ್ಮರಣ
ಮಂಗಳೂರು (Times Of Coorg@dakshina Kannada) : ಮಂಗಳೂರು ಸಮೀಪ ಬಂಗ್ಲೆಗಡ್ಡೆ ಎಂಬಲ್ಲಿ ಮನೆ ಮೇಲೆ ಗುಡ್ಡ ಕುಸಿದು ಇಬ್ಬರು ಮಕ್ಕಳು ಮಣ್ಣಿನಡಿ ಸಿಲುಕಿರುವ ಘಟನೆ ಇಂದು ಮಧ್ಯಾಹ್ನ ನಡೆದಿತ್ತು.
ಇಂದು ಮದ್ಯಾಹ್ನ 2.30 ವೇಳೆ ಮಂಗಳೂರಿನ ಬಂಗ್ಲಗುಡ್ಡೆಯಲ್ಲಿ ಸಂಭವಿಸಿದ ಘಟನೆಯಲ್ಲಿ ನಾಲ್ಕು ಮನೆಗಳು ಸಂಪೂರ್ಣವಾಗಿ ನೆಲಸಮವಾಗಿತ್ತು. ಮಣ್ಣಿನ ಅಡಿಯಲ್ಲಿ ಇಬ್ಬರು ಮಕ್ಕಳು ಸಿಲುಕಿದ್ದು, ಎನ್‌ಡಿಆರ್‌ಎಫ್ ಸಿಬ್ಬಂದಿ ನಡೆಸಿದ ರಕ್ಷಣಾ ಕಾರ್ಯಚರಣೆಯಲ್ಲಿ 10 ವರ್ಷದ ಹಾಗು 16 ವರ್ಷದ ಬಾಲಕರ ಮೃತದೇಹ ಪತ್ತೆಯಾಗಿದೆ ಮೃತಪಟ್ಟ ಮಕ್ಕಳನ್ನು ಸಫ್ವಾನ್ (16) ಸಹ್ಲಾ (10) ಎಂದು ಗುರುತಿಸಲಾಗಿದೆ.
ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಸ್ಥಳೀಯರು ಎನ್ ಡಿಆರ್ ಎಫ್ ಸಿಬ್ಬಂದಿ, ಪೊಲೀಸರು, ಸ್ಥಳೀಯರು ಸತತ ನಾಲ್ಕು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಮೃತದೇಹಗಳನ್ನು ಹೊರತೆಗೆದಿದ್ದಾರೆ.